Advertisement

ಅನಧಿಕೃತ ವಾಹನಗಳ ಸಂಚಾರಕ್ಕೆ ಬ್ರೇಕ್‌

04:12 PM Sep 17, 2021 | Team Udayavani |

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲೂಕಿನ ಮರಿನಾಯಕನಹಳ್ಳಿ ಬಳಿ ನಡೆದ ಭೀಕರ ಅಪಘಾತಕ್ಕೆ ಸಾರಿಗೆ ಅಧಿಕಾರಿಗಳ ನಿರ್ಲಕ್ಷ್ಯ ಕಾರಣ ಎಂಬ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ಗುರುವಾರ ಕಾರ್ಯಾಚರಣೆ ನಡೆಸಿ ಎರಡು ಜೀಪ್‌ ವಶಕ್ಕೆ ಪಡೆದು, ಅನಧಿಕೃತ ವಾಹನಗಳ ಸಂಚಾರಕ್ಕೆ ಬ್ರೇಕ್‌ ಹಾಕಿದ್ದಾರೆ.

Advertisement

ಆಟೋ ಜೀಪ್‌ಗಳಲ್ಲೇ ಪ್ರಯಾಣಿಕರ ಸಂಚಾರ, ಅನಧಿಕೃತ ವಾಹನಗಳ ಓಡಾಟಕ್ಕಿಲ್ಲ ಕಡಿವಾಣ ಎಂಬ ತಲೆಬರಹದಡಿಯಲ್ಲಿ ಉದಯವಾಣಿ ಯಲ್ಲಿ ಪ್ರಕಟವಾದ ವಿಶೇಷ ವರದಿಯಿಂದ ಎಚ್ಚೆತ್ತುಕೊಂಡಿರುವ ಆರ್‌ಟಿಒ ಅಧಿಕಾರಿಗಳು, ನಗರದಲ್ಲಿ ಕಾರ್ಯಾಚರಣೆ ನಡೆಸಿ ಎರಡು ಕ್ರೂಸರ್‌ ವಾಹನ ವಶಕ್ಕೆ ಪಡೆದುಕೊಂಡಿದ್ದಾರೆ.

ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿ ಮಂಜುನಾಥ್‌ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಬಾಗೇಪಲ್ಲಿ, ಅಗಲಗುರ್ಕಿ ಮಾರ್ಗದಲ್ಲಿ ಪ್ರಾಯಾಣಿಕರನ್ನು ಸಾಗಿಸುತ್ತಿದ್ದ ಎರಡು ಕ್ರೂಸರ್‌ ವಾಹನ ತಡೆದು, ಅದರಲ್ಲಿದ್ದ ಪ್ರಯಾಣಿಕರನ್ನು ಕೆಳಗೆ ಇಳಿಸಿ ವಾಹನ ವಶಕ್ಕೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ:ಸರ್ಕಾರಿ ಪಿಯು ಕಾಲೇಜು ಪ್ರವೇಶಕ್ಕೆ ದುಬಾರಿ ಶುಲ್ಕ ವಸೂಲಿ ಸರಿನಾ?

ಅಧಿಕಾರಿಗಳು ಮತ್ತು ಸಿಬ್ಬಂದಿಯ ಕೊರತೆಯ ನಡುವೆಯೂ ಆರ್‌ಟಿಒ ಅಧಿಕಾರಿಗಳು ಅನಧಿಕೃತ ವಾಹನಗಳ ಸಂಚಾರಕ್ಕೆ ಬ್ರೇಕ್‌ ಹಾಕಲು
ಮುಂದಾಗಿದ್ದಾರೆ. ಚಿಂತಾಮಣಿಯಲ್ಲಿ ನಡೆದ ಘಟನೆ ಆಧರಿಸಿ ಕಾರ್ಯಾಚರಣೆಯನ್ನು ಸೀಮಿತಗೊಳಿಸದೆ, ಜಿಲ್ಲೆಯಲ್ಲಿ ಅನಧಿಕೃತ ವಾಹನಗಳ ಸಂಚಾರಕ್ಕೆ ಸಂಪೂರ್ಣ ಕಡಿವಾಣ ಹಾಕಬೇಕೆಂದು ನಾಗರಿಕರು ಆಗ್ರಹಿಸಿದ್ದಾರೆ.

Advertisement

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅನಧಿಕೃತ ವಾಹನಗಳ ಸಂಚಾರ ನಿರಾತಂಕವಾಗಿ ನಡೆಯುತ್ತಿದ್ದು, ಸಾರಿಗೆ ಇಲಾಖೆಯ ಅಧಿಕಾರಿಗಳು ಮತ್ತಷ್ಟು ಬಿಗಿ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next