Advertisement

ಆಗುಂಬೆ ಘಾಟಿಯಲ್ಲಿ 19ರಿಂದ ಸಂಚಾರ ನಿಷೇಧ

01:11 AM Mar 01, 2019 | Team Udayavani |

ಶಿವಮೊಗ್ಗ: ದ್ವಿತೀಯ ಪಿಯು ಪರೀಕ್ಷೆ ಹಿನ್ನೆಲೆಯಲ್ಲಿ ಆಗುಂಬೆ ಘಾಟಿಯಲ್ಲಿ ರಸ್ತೆ ಸಂಚಾರ ನಿಷೇಧಿಸುವ ದಿನಾಂಕವನ್ನು ಮುಂದೂಡಲಾಗಿದೆ. ಮಾ.19ರಿಂದ ಒಂದು ತಿಂಗಳ ಕಾಲ ರಸ್ತೆ ಸಂಚಾರಕ್ಕೆ ನಿಷೇಧ ಹೇರಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎ.ದಯಾನಂದ ತಿಳಿಸಿದ್ದಾರೆ.

Advertisement

ಘಾಟಿಯಲ್ಲಿನ ಕೆಲವೆಡೆ ದುರಸ್ತಿ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಈ ಹಿಂದೆ ಮಾ. 1ರಿಂದ 31ರವರೆಗೆ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಅವರು ಆದೇಶಿಸಿದ್ದರು. ಆದರೆ ದ್ವಿತೀಯ ಪಿಯು ಪರೀಕ್ಷೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಂಚಾರ ನಿಷೇಧ ದಿನಾಂಕವನ್ನು ಮುಂದೂಡಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಮಾ. 19ರಿಂದ ದುರಸ್ತಿ ಕಾರ್ಯವನ್ನು ಆರಂಭಿಸಲು ಎಲ್ಲಾ ಸಿದಟಛಿತೆಗಳನ್ನು ನಡೆಸುವಂತೆ ಜಿಲ್ಲಾ ಧಿಕಾರಿಗಳು ಸೂಚಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next