Advertisement

ಸಂಚಾರ ನಿಯಮ ಉಲ್ಲಂಘಿಸಿದರೆ ಕ್ರಮ

08:07 AM May 27, 2019 | Team Udayavani |

ಬಾಗೇಪಲ್ಲಿ: ದ್ವಿಚಕ್ರ, ಆಟೋ ಸೇರಿದಂತೆ ಸರಕು ಸಾಗಣಿಕೆ ವಾಹನಗಳಲ್ಲಿ ಮಿತಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪ್ರಯಾಣಿಸಿ ಸಂಚಾರ ನಿಯಮಗಳನ್ನು ಉಲ್ಲಂಘಿಸುವಂತಹ ವಾಹನಗಳ ಮಾಲೀಕರ ಮತ್ತು ಚಾಲಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸ್‌ ಉಪ ನಿರೀಕ್ಷಕ ಪಿ.ಎಂ. ನವೀನ್‌ ವಾಹನ ಚಾಲಕರಿಗೆ ಎಚ್ಚರಿಕೆ ನೀಡಿದರು.

Advertisement

ಪಟ್ಟಣದ ಡಾ.ಎಚ್.ಎನ್‌.ವೃತ್ತದಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಕಾರ್ಮಿಕರಿಗೆ, ವಾಹನ ಚಾಲಕರಿಗೆ ಕಾನೂನು ಅರಿವು ಮೂಡಿಸುವ ಜನಜಾಗೃತಿ ಕಾರ್ಯ ಕ್ರಮದಲ್ಲಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಆಟೋ ಮತ್ತು ಸರಕು ಸಾಗಣಿಕೆ ಸೇರಿದಂತೆ ವಿವಿಧ ರೀತಿ ವಾಹನಗಳಲ್ಲಿ ಮಿತಿಗಿಂತ ಹೆಚ್ಚಿನ ಸಂಖ್ಯೆ ಯಲ್ಲಿ ಜನರನ್ನು ತುಂಬಿಸಿ ಕೊಂಡು ಹೋಗುತ್ತಿರುವುದು ಹೆಚ್ಚಾಗಿದೆ.

ಅಪಘಾತಗಳು ಸಂಭವಿಸಿದ ಸಂದರ್ಭದಲ್ಲಿ ಅಮಾಯಕ ಪ್ರಯಾ ಣಿಕರು ಜೀವ ಕಳೆದುಕೊಳ್ಳುವಂತಾಗಿದೆ. ಇದನ್ನು ತಡೆಯುವ ನಿಟ್ಟಿನಲ್ಲಿ ಕಾನೂನು ಸುವ್ಯವಸ್ಥೆ ಉಲ್ಲಂಘಿಸುವಂತಹ ವಾಹನ ಚಾಲಕರ ಮತ್ತು ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದರು.

ಈ ಸಂಬಂಧ ಕಟ್ಟಡ ನಿರ್ಮಾಣ ಮಾಲೀಕರು ಮತ್ತು ಗುತ್ತಿಗೆದಾರರು, ಕೂಲಿ ಕಾರ್ಮಿಕರು, ಆಟೋ ಚಾಲಕ ರೊಂದಿಗೆ ಸಭೆ ನಡೆಸಿ ದ್ವಿಚಕ್ರ ವಾಹನ ಸವಾರರು 3 ಮಂದಿ ಸವಾರಿ ಮಾಡ ಬಾರದು ಎಂದರಲ್ಲದೇ ಹೆಲ್ಮೆಟ್ ಕಡ್ಡಾಯವಾಗಿ ಧರಿಸಬೇಕು ಎಂದು ತಾಕೀತು ಮಾಡಿದರು. ಆಟೋ ಚಾಲಕರು ಕಡ್ಡಾಯವಾಗಿ ಸಮವಸ್ತ್ರ ಗಳನ್ನು ಧರಿಸಬೇಕು, ಚಾಲನಾ ಪರ ವಾನಗಿ, ವಿಮೆ ಸೇರಿದಂತೆ ವಾಹನಕ್ಕೆ ಸಂಬಂಧಿಸಿದ ದಾಖಲೆಗಳನ್ನು ಹೊಂದಿರ ಬೇಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next