Advertisement
ಲೊರೆಟ್ಟೋಪದವು ನಿವಾಸಿ ದಾವುದುಲ್ ಹಕೀಮ್ ಪ್ರಕರಣದ ಆರೋಪಿಯಾಗಿದ್ದು, ಆತ ದ್ವಿಚಕ್ರ ವಾಹನವನ್ನು ಅಡ್ಡಾದಿಡ್ಡಿಯಾಗಿ ಚಲಾಯಿಸಿಕೊಂಡು ಬರುತ್ತಿದ್ದಾಗ ಬಂಟ್ವಾಳ ನಗರ ಠಾಣಾ ಪಿಎಸ್‌ಐ ಆಂಜನೇಯ ರೆಡ್ಡಿ ಹಾಗೂ ಸಿಬಂದಿ ತಡೆದು ವಿಚಾರಿಸಿದಾಗ ಗಾಂಜಾವನ್ನು ಸೇವಿಸಿರುವುದಾಗಿ ಒಪ್ಪಿಕೊಂಡಿದ್ದ. ಆತನ ದ್ವಿಚಕ್ರ ವಾಹನವನ್ನು ಪರಿಶೀಲಿಸಿದಾಗ 1.07 ಗ್ರಾಂ ನಿದ್ರಾಜನಕ ಎಂಡಿಎಂಎ ಹಾಗೂ 15.31 ಗ್ರಾಂ ಗಾಂಜಾ ಪತ್ತೆಯಾಗಿದೆ. ತಾನು ಅಪರಿಚಿತನೋರ್ವನಿಂದ ಖರೀದಿಸಿ ಅದರಲ್ಲಿ ಸ್ವಲ್ಪ ಗಾಂಜಾ ಸೇವಿಸಿ ಉಳಿದದ್ದನ್ನು ಮಾರಾಟಕ್ಕಾಗಿ ಸಾಗಾಟ ಮಾಡುತ್ತಿರುವುದಾಗಿ ಆತ ಒಪ್ಪಿಕೊಂಡಿದ್ದಾನೆ. ಪೊಲೀಸರು ಆತನಿಂದ 2,500 ರೂ. ಮೌಲ್ಯದ ಮಾದಕ ವಸ್ತುಗಳು ಹಾಗೂ ಸಾಗಾಟಕ್ಕೆ ಉಪಯೋಗಿಸಿದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಆತನ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Advertisement
Bantwal: ಗಾಂಜಾ ಸೇವನೆ, ಸಾಗಾಟ; ಓರ್ವ ವಶಕ್ಕೆ
07:45 PM May 16, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.