ಲಕ್ನೋ: ಬಸ್ ಪಲ್ಟಿಯಾಗಿ 5 ಮಂದಿ ಮೃತಪಟ್ಟು, 15 ಕ್ಕೂ ಹೆಚ್ಚಿನ ಮಂದಿಗೆ ಗಾಯಗಳಾಗಿರವ ಘಟನೆ ಉತ್ತರ ಪ್ರದೇಶದ ಜಲೌನ್ ಜಿಲ್ಲೆಯ ಮಧುಘರ್ ಪೊಲೀಸ್ ಠಾಣೆ ವ್ಯಾಪ್ತಿಯ ಗೋಪಾಲಪುರ ಬಳಿ ಶನಿವಾರ ರಾತ್ರಿ (ಮೇ 6 ರಂದು) ನಡೆದಿದೆ.
ಇದನ್ನೂ ಓದಿ: ವಿದ್ಯಾರ್ಥಿನಿಯರಿಗೆ ಉಚಿತವಾಗಿ ʼದಿ ಕೇರಳ ಸ್ಟೋರಿʼ ಪ್ರದರ್ಶನ ಏರ್ಪಡಿಸಿದ ಬಿಜೆಪಿ ನಾಯಕ
40 ಮಂದಿ ಮದುವೆಯ ಅತಿಥಿಗಳನ್ನು ಹೊತ್ತುಕೊಂಡು ಬರುತ್ತಿದ್ದ ಬಸ್ಸಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದಿದೆ. ಇದರಿಂದ ಬಸ್ ಪಲ್ಟಿಯಾಗಿದ್ದು ಬಸ್ಸಿನಲ್ಲಿದ್ದ 40 ಜನರಲ್ಲಿ ಐವರು ಮೃತಪಟ್ಟಿದ್ದಾರೆ, ಇನ್ನುಳಿದ 15 ಕ್ಕೂ ಹೆಚ್ಚಿನ ಮಂದಿಗೆ ಗಾಯಗಳಾಗಿವೆ. ಅವರನ್ನು ಆಸ್ಪತ್ರೆ ದಾಖಲು ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಇನ್ನು ಬಸ್ ಪಲ್ಟಿಯಾದ ಮತ್ತೊಂದು ಘಟನೆ ಉತ್ತರ ಪ್ರದೇಶ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಶನಿವಾರ ನಡೆದಿದೆ. 40 ಜನರಿದ್ದ ಬಸ್ ಬಿಹಾರದಿಂದ ದೆಹಲಿಗೆ ಪ್ರಯಾಣಿಸುತ್ತಿತ್ತು. ಈ ವೇಳೆ ಏಕಾಏಕಿ ಬಸ್ ಪಲ್ಟಿಯಾಗಿ ನಾಲ್ವರು ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ.