ಡೆಹ್ರಾಡೂನ್: ಮದುವೆ ಸಂಭ್ರಮವನ್ನು ಮುಗಿಸಿ ಹಿಂತಿರುತ್ತಿದ್ದ ವಾಹನವೊಂದು ಕಂದಕಕ್ಕೆ ಉರುಳಿ 11 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಉತ್ತರಖಂಡ್ ರಾಜ್ಯದ ಚಂಪಾವತ್ ಜಿಲ್ಲೆಯ ಸುಖಿಧಾಂಗ್-ದಂಡಮಿನಾರ್ ರಸ್ತೆಯಲ್ಲಿ ಮಂಗಳವಾರ ಮುಂಜಾನೆ ನಡೆದಿದೆ.
ಮೃತರನ್ನು ಚಂಪಾವತ್ ಜಿಲ್ಲೆಯ ತನಕ್ಪುರದ ನಿವಾಸಿಗಳು ಎಂದು ಗುರುತಿಸಲಾಗಿದೆ.
ತನಕ್ ಪುರದ ಪಂಚಮುಖಿ ಧರ್ಮಶಾಲಾದಲ್ಲಿ ಮದುವೆ ಸಂಭ್ರಮಕ್ಕೆ ಹೋಗಿ ವಾಪಾಸ್ ಬರುವ ವೇಳೆ ವಾಹನ ಅಳವಾದ ಕಂದಕಕ್ಕೆ ಉರುಳಿ ಬಿದ್ದಿದ್ದು ಪರಿಣಾಮ ವಾಹನದಲ್ಲಿದ್ದ 16 ಜನರ ಪೈಕಿ 11 ಜನ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಉಳಿದವರ ಹುಡುಕಾಟ ಮುಂದುವರೆದಿದೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಚಾಲಕ ಹಾಗೂ ಇತರರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯಲ್ಲಿ ತಮ್ಮರನ್ನು ಕಳೆದುಕೊಂಡ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವವರಿಗೆ 50 ಸಾವಿರ ರೂಪಾಯಿ ಪರಿಹಾರವನ್ನು ಪ್ರಧಾನಿ ಮೋದಿ ಘೋಷಣೆ ಮಾಡಿದ್ದಾರೆ.