ಮಣಿಪಾಲ: ಶಿಕ್ಷಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಲೆವೂರಿನಲ್ಲಿ ಭಾನುವಾರ ರಾತ್ರಿ ನಡೆದಿದೆ.
ಅಲೆವೂರಿನ ನಿವಾಸಿ ಅಮೃತಾ ಪ್ರಾಯ (32) ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿ.
ಇವರು ಉಡುಪಿಯ ಖಾಸಗಿ ಶಾಲೆಯೊಂದರಲ್ಲಿ ಕಳೆದ ಎಂಟು ವರ್ಷಗಳಿಂದ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
ಕೆಲ ದಿನಗಳಿಂದ ಕೆಲಸದ ಒತ್ತಡದಿಂದ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಈ ಕಾರಣದಿಂದ ಭಾನುವಾರ (ನ.21) ರಂದು ರಾತ್ರಿ ಮನೆಯಲ್ಲಿ ನೇಣಿಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ಪತಿ ಹಾಗೂ ಮೂವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.