Advertisement

ಪತ್ನಿ ಸಾವನ್ನಪ್ಪಿದ ಕೆಲವೇ ತಾಸಿನಲ್ಲಿ ಪತಿ ಸಾವು

10:34 PM Jun 23, 2021 | Team Udayavani |

ಬೆಳ್ತಂಗಡಿ: ಕೋವಿಡ್‌ ಸೋಂಕು ಬಾಧಿಸಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಪತಿ ಹಾಗೂ ಪತ್ನಿ 24 ಗಂಟೆಯ ಅಂತರದಲ್ಲಿ ಮೃತಪಟ್ಟ ಘಟನೆ  ನೆರಿಯ ಗ್ರಾಮದಲ್ಲಿ ನಡೆದಿದೆ.

Advertisement

ನೆರಿಯ ಗ್ರಾಮದ ಪರಂದಾಡಿ ನಿವಾಸಿ ಸಾರಮ್ಮ (58) ಅವರು ವೆನ್ಲಾಕ್‌ ಆಸ್ಪತ್ರೆಯಲ್ಲಿ ಜೂ. 22ರಂದು ಮೃತಪಟ್ಟರೆ, ಅವರ ಪತಿ ಇಬ್ರಾಹಿಂ (68) ಜೂ. 23ರಂದು ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಜೂ. 19ರಂದು ಇಬ್ಬರಿಗೂ ಕೋವಿಡ್‌ ಇರುವುದು ದೃಢಪಟ್ಟಿದ್ದ ಕಾರಣ ಸಾರಮ್ಮ ಅವರನ್ನು ಮೊದಲು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ಯಲಾಗಿತ್ತು. ಬಳಿಕ ಪತಿ ಇಬ್ರಾಹಿಂ ಹೃದಯ ಸಂಬಂಧಿ ಕಾಯಿಲೆ ತೀವ್ರಗೊಂಡ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.

ಕಳೆದ ಕೆಲವು ದಿನಗಳಿಂದ ಇವರಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಸಾರಮ್ಮ ಮಂಗಳವಾರ ಮೃತಪಟ್ಟರೆ ಪತಿ ಇಬ್ರಾಹಿಂ ಬುಧವಾರ ಸಾವನ್ನಪ್ಪಿದ್ದಾರೆ. ಇವರಿಬ್ಬರ ಸಾವಿಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಮೃತರ ಅಂತ್ಯಸಂಸ್ಕಾರ ನೆರಿಯ ಜುಮ್ಮಾ ಮಸ್ಜಿದ್‌ ದಫನ ಭೂಮಿಯಲ್ಲಿ ಕೋವಿಡ್‌ ನಿಯಮಾನುಸಾರ ನಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next