ಗದಗ: ದ್ವಿತೀಯ ಪಿಯು ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಹರ್ತಿ ಗ್ರಾಮದಲ್ಲಿ ನಡೆದಿದೆ.
ಹರ್ತಿ ಗ್ರಾಮದ ವಿದ್ಯಾರ್ಥಿನಿ ಪವಿತ್ರಾ ಪ್ರಭುಗೌಡ ಲಿಂಗಧಾಳ(18) ಸಾವಿಗೀಡಾಗಿದ್ದಾಳೆ. ನಗರದ ಸನ್ಮಾರ್ಗ ಪದವಿ ಪೂರ್ವ ಕಾಲೇಜಿನಲ್ಲಿ ವಿಜ್ಞಾನ ವಿಷಯದಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಕನ್ನಡ, ಇಂಗ್ಲೀಷ್ ಭಾಷಾ ವಿಷಯಗಳನ್ನು ಹೊರತುಪಡಿಸಿ ಗಣಿತ, ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಜೀವಶಾಸ್ತ್ರ ವಿಷಯದಲ್ಲಿ ಅನುತ್ತೀರ್ಣಳಾಗಿದ್ದಳು.
ಇದನ್ನೂ ಓದಿ:ಮಡಿಕೇರಿ: ಪಿಯುಸಿ ಫಲಿತಾಂಶ ಪ್ರಕಟಗೊಳ್ಳುವ ಮೊದಲೇ ವಿದ್ಯಾರ್ಥಿನಿ ಆತ್ಮಹತ್ಯೆ
ಅನುತ್ತೀರ್ಣಗೊಂಡ ವಿಷಯ ತಿಳಿಯುತ್ತಿದ್ದಂತೆ ಮನನೊಂದ ವಿದ್ಯಾರ್ಥಿನಿ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಪೋಷಕರು ವಿದ್ಯಾರ್ಥಿನಿಯನ್ನು ಕೂಡಲೇ ಗದಗ ಜಿಮ್ಸ್ ಆಸ್ಪತ್ರೆಗೆ ಸಾಗಿಸಲು ಮುಂದಾದರೂ ಮಾರ್ಗ ಮಧ್ಯೆಯೇ ಸಾವಿಗೀಡಾಗಿದ್ದಾಳೆ. ಗದಗ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.