Advertisement

ಹಾಸನ: ಚಲಿಸುತ್ತಿದ್ದ ಬೈಕ್‌ ಮೇಲೆ ಬಿದ್ದ ಮರ: ನರಳಾಡಿ ಪ್ರಾಣ ಬಿಟ್ಟ ಸವಾರ

07:12 PM Aug 07, 2022 | Team Udayavani |

ಹಾಸನ: ಜಿಲ್ಲೆಯ ಮಳೆ ಮತ್ತು ಗಾಳಿಯ ಅಬ್ಬರ ಮುಂದುವರಿದಿದ್ದು ಗಾಳಿಗೆ ಬೈಕ್  ಮೇಲೆ ಮರ ಬಿದ್ದು ಸ್ಥಳದಲ್ಲೇ ಸವಾರ ಸಾವನ್ನಪ್ಪಿರುವ ಘಟನೆ ಚನ್ನರಾಯಪಟ್ಟಣದಲ್ಲಿ ನಡೆದಿದೆ.

Advertisement

ಚನ್ನರಾಯಪಟ್ಟಣ ತಾಲೂಕು ಕಲ್ಲಸೋಮನಹಳ್ಳಿ ಗ್ರಾಮದ ರಂಗಶೆಟ್ಟಿ (40) ಮೃತ ದುರ್ದೈವಿ.

ಚನ್ನರಾಯಪಟ್ಟಣ ತಾಲ್ಲೂಕಿನ ಬಾಗೂರು ರಸ್ತೆಯ ಮಾಳೆಕೊಪ್ಪಲು ಗ್ರಾಮದಲ್ಲಿ  ಭಾನುವಾರ ಮಧ್ಯಾಹ್ನ ಘಟನೆ ಸಂಭವಿಸಿದೆ.

ಇದನ್ನೂ ಓದಿ: ಹರ್ ಫರ್ ತಿರಂಗ: ಕಿಚ್ಚ ಸುದೀಪ್ ಗೆ ಧ್ವಜ ನೀಡಿದ ನಳಿನ್ ಕುಮಾರ್

ಮರದ ಕೆಳಗೆ ಸಿಲುಕಿ ನರಳಾಡಿ ರಂಗಶೆಟ್ಟಿ ಸಾವನ್ನಪ್ಪಿದ್ದಾರೆ. ಬೈಕ್‌ನಲ್ಲಿ ಚನ್ನರಾಯಪಟ್ಟಣದಿಂದ ತನ್ನ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಬೈಕ್ ಮೇಲೆ  ಮರ ಬಿದ್ದಿದ್ದು ಮರದಡಿ ಸಿಲುಕಿ ಕೆಲಕಾಲ‌ ಒದ್ದಾಡಿ ಸಾವನ್ನಪ್ಪಿದ್ದಾರೆ.

Advertisement

ಎರಡು ಜೆಸಿಬಿ, ಹಿಟಾಚಿ ಯಂತ್ರ ಬಳಸಿ ವ್ಯಕ್ತಿಯ ಶವವನ್ನು ಅಗ್ನಿಶಾಮಕದಳದ ಸಿಬ್ಬಂದಿ ಹೊರ ತೆಗೆದಿದ್ದಾರೆ.

ಚನ್ನರಾಯಪಟ್ಟಣದ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಮೃತದೇಹ ರವಾನೆ ಮಾಡಲಾಗಿದೆ.

ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next