ಕಾರ್ಕಳ: ಉಡುಪಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಜಗೋಳಿ ಸಮೀಪದ ನೆಲ್ಲಿಕಾರು ಗ್ರಾ.ಪಂ.ವ್ಯಾಪ್ತಿಯ ಮೈನೇರು ಪ್ರದೇಶದಲ್ಲಿ ಖಾಸಗಿ ಬಸ್ ಹಾಗೂ ಕಾರು ನಡುವೆ ಢಿಕ್ಕಿ ಸಂಭವಿಸಿ ಗಂಡ ಹೆಂಡತಿ ಮಗು ಸಹಿತ ಮೂರು ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ (ಡಿ.10 ರಂದು) ಬೆಳಗ್ಗೆ ನಡೆದಿದೆ.
ಬೆಂಗಳೂರು ಮೂಲದ ದಂಪತಿ ತಮ್ಮ ಒಂದೂವರೆ ವರ್ಷದ ಮಗುವಿನೊಂದಿಗೆ ಬೆಳ್ತಂಗಡಿ ಕಡೆಯಿಂದ ಕಾರ್ಕಳ ಕಡೆಗೆ ಬರುತ್ತಿದ್ದಾಗ ಕಾರ್ಕಳದಿಂದ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಢಿಕ್ಕಿ ಹೊಡೆದು, ಕಾರು ಬಸ್ಸಿನಡಿ ಭಾಗದಲ್ಲಿ ಸಿಕ್ಕಿ ಹಾಕಿಕೊಂಡು ಅಪ್ಪಚ್ಚಿಯಾಗಿ ಮೂವರು ಸ್ಥಳದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಕಾರು ಬೆಂಗಳೂರು ಮೂಲದವರು ಎನ್ನಲಾಗಿದ್ದು, ದಂಪತಿ ಸಾಧಾರಣ ಮೂವತ್ತರ ಹರೆಯದವರು ಎಂದು ತಿಳಿದು ಬಂದಿದೆ.
ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ತನಿಖೆ ಆರಂಭಿಸಿದ್ದಾರೆ.
Related Articles
ಮೂವರ ಮೃತದೇಹಗಳನ್ನು ಸಾರ್ವಜನಿಕರ ಸಹಕಾರದೊಂದಿಗೆ ತೆಗೆಯಲಾಗಿದೆ. ಮೃತರ ವಿವರ ಇನ್ನಷ್ಟೇ ತಿಳಿದು ಬರಬೇಕಾಗಿದೆ.