Advertisement
ನಾಡ ಗ್ರಾಮದ ನಿವಾಸಿ, ಪತ್ರಕರ್ತ ನೋಯೆಲ್ ಚುಂಗಿಗುಡ್ಡೆ ಅವರ ಪತ್ನಿ ರೊಸಿರಿಯಾ (34) ಹಾಗೂ ಪುತ್ರ ಶಾನ್ ರಿಚ್ಚಿ (11) ಸಾವನ್ನಪ್ಪಿದವರು.
Related Articles
Advertisement
ಸ್ವಲ್ಪ ದೂರದಲ್ಲಿ ನದಿಯಲ್ಲಿ ಮಗನ ಮೃತದೇಹ ಕಂಡು ಬಂದಿದ್ದು, ಸ್ಥಳೀಯರ ಸಹಾಯದಿಂದ ಮೇಲೆತ್ತಲಾಯಿತು. ಕೊಚ್ಚಿಕೊಂಡು ಹೋಗಿದ್ದ ತಾಯಿಯ ಮೃತದೇಹ ಮರವಂತೆಯ ಮಾರಸ್ವಾಮಿ ದೇವಸ್ಥಾನದ ಎದುರಿನ ಸೇತುವೆ ಸಮೀಪ ಸಿಕ್ಕಿದ್ದು, ಸ್ಥಳೀಯರು ಹಾಗೂ ಕುಂದಾಪುರದ ಅಗ್ನಿ ಶಾಮಕ ದಳದ ಸಿಬಂದಿ ಸಹಕಾರದಿಂದ ಮೇಲೆತ್ತಲಾಯಿತು.
ಪ್ರತಿ ದಿನ ಸಂಜೆ ಮಗನನ್ನು ವಾಯು ವಿಹಾರಕ್ಕೆಂದು ತಂದೆ ಅಥವಾ ತಾಯಿ ನದಿದಂಡೆಗೆ ಕರೆದುಕೊಂಡು ಹೋಗುತ್ತಿದ್ದರು. ಆದರೆ ಶುಕ್ರವಾರ ಮಳೆ ಕಡಿಮೆಯಿದ್ದ ಕಾರಣ ಬೆಳಗ್ಗಿನ ವೇಳೆಯೇ ವಿಹಾರಕ್ಕೆ ತೆರಳಿದ್ದರು. ಶನಿವಾರವೂ ಅದೇ ಸಮಯಕ್ಕೆ ಮಗ ಹಠ ಮಾಡಿದ್ದು, ತಂದೆ-ತಾಯಿಯರಿಬ್ಬರೂ ಬೇಡವೆಂದರೂ ಕೇಳಲಿಲ್ಲ. ಮಗನ ಹಠಕ್ಕಾಗಿ ತಾಯಿ ವಾಯು ವಿಹಾರಕ್ಕೆ ನದಿದಂಡೆಗೆ ಕಡೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ವಿಧಿಯಾಟ ಮಾತ್ರ ಬೇರೆಯದ್ದೇ ಆಗಿತ್ತು.
ಘಟನಾ ಸ್ಥಳಕ್ಕೆ ಬೈಂದೂರು ವೃತ್ತ ನಿರೀಕ್ಷಕ ಸಂತೋಷ್ ಕಾಯ್ಕಿಣಿ, ಗಂಗೊಳ್ಳಿ ಠಾಣಾಧಿಕಾರಿ ನಂಜಾ ನಾಯ್ಕ, ಕುಂದಾಪುರ ಅಗ್ನಿ ಶಾಮಕ ಸಿಬಂದಿ, ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಶಿಧರ ಹೆಮ್ಮಾಡಿ, ಮತ್ತಿತರರು ಭೇಟಿ ನೀಡಿದರು. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.