ಮಂಡ್ಯ: ಹೆರಿಗೆ ನೋವು ಕಾಣಿಸಿಕೊಂಡಿದ್ದರೂ ಗರ್ಭಿಣಿಯನ್ನ ದಾಖಲಿಸಿಕೊಳ್ಳದ ಹಿನ್ನೆಲೆಯಲ್ಲಿ ಆಸ್ಪತ್ರೆ ಬಾಗಿಲಲ್ಲೇ ಹೆರಿಗೆಯಾಗಿ ಮಗು ಸಾವನ್ನಪ್ಪಿರುವ ಮನಕಲಕುವ ಘಟನೆ ನಗರದ ಮಿಮ್ಸ್ ನಲ್ಲಿ ನಡೆದಿದೆ.
ನಗರದ ನಿವಾಸಿ ಸೋನು ಎಂಬ ಮಹಿಳೆಗೆ ಹೆರಿಗೆ ನೋವು ಬೆಳಿಗ್ಗೆ 6 ಗಂಟೆ ಸಮಯದಲ್ಲಿ ಕಾಣಿಸಿಕೊಂಡಿತ್ತು. ನಂತರ ಮಿಮ್ಸ್ ನ ಹೆರಿಗೆ ವಾಡ್೯ಗೆ ಕರೆತರಲಾಗಿತ್ತು.
ಆದರೆ ಅಸ್ಪತ್ರೆ ಸಿಬ್ಬಂದಿಗಳು ಕೋವಿಡ್ ರಿಪೋಟ್೯ ತರುವಂತೆ ಕೇಳಿದ್ದಾರೆ. ಆಗ ಕೋವಿಡ್ ಟೆಸ್ಟ್ ಮಾಡಿಸಿ ವರದಿಗಾಗಿ ಕಾದು ಕುಳಿತ್ತಿದ್ದಾರೆ. ಸುಮಾರು 2 ಗಂಟೆ ಕಾದಿದ್ದಾರೆ. ಈ ಸಮಯದಲ್ಲಿ ಹೆರಿಗೆ ನೋವು ಹೆಚ್ಚಾಗಿ ಮಗು ಕೆಳಗೆ ಬಿದ್ದು ಸಾವನ್ನಪ್ಪಿದೆ.
ಕೊವಿಡ್ ರಿಪೋರ್ಟ್ ಇಲ್ಲ ಎನ್ನುವ ಕಾರಣಕ್ಕೆ ಅಡ್ಮಿಟ್ ಮಾಡಿಕೊಳ್ಳದ ಸಿಬ್ಬಂದಿ.ಬೆಳಿಗ್ಗೆ 6 ಗಂಟೆಯಲ್ಲಿ ನೋವು ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ 8 ಗಂಟೆಗೆ ಆಸ್ಪತ್ರೆಗೆ ಪೋಷಕರು ಕರೆದುಕೊಂಡು ಬಂದಿದ್ದರು. 2 ಗಂಟೆ ಕಾದರು ದಾಖಲು ಮಾಡಿಕೊಂಡಿಕೊಳ್ಳದೆ ನಿರ್ಲಕ್ಷ್ಯ ವಹಿಸಿದ್ದರು. ಸಾವನ್ನಪ್ಪಿದೆ. ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯದ ವಿರುದ್ಧ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆ ಸಿಬ್ಬಂದಿ ಹಾಗೂ ವೈದ್ಯರ ವಿರುದ್ಧ ಗಲಾಟೆ ಮಾಡಿದ್ದಾರೆ.
ಪೋಷಕರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.