Advertisement

ಆನ್ಲೈನ್ ತರಗತಿಯ ಖಿನ್ನತೆಯಿಂದ ನೇಣಿಗೆ ಶರಣಾದ ಮಗಳು: ವಿಷಯ ತಿಳಿದ ತಂದೆ ಹೃದಯಾಘಾತದಿಂದ ಸಾವು

02:24 PM Jun 20, 2021 | Team Udayavani |

ಮಂಡ್ಯ: ಮಗಳ ಆತ್ಮಹತ್ಯೆ, ಮನನೊಂದ ತಂದೆಯೂ ಸಾವನ್ನಪ್ಪಿರುವ ಮಳವಳ್ಳಿ ತಾಲೂಕಿನ ತಳಗವಾದಿ ಗ್ರಾಮದಲ್ಲಿ ಘಟನೆ ನಡೆದಿದೆ.

Advertisement

ಗ್ರಾಮದ ಪುತ್ರಿ ಬಾಂಧವ್ಯ (17), ರಾಜು (65) ಸಾವಿಗೀಡಾದ ತಂದೆ ಮಗಳು. ಪ್ರತಿಭಾನ್ವಿತೆಯಾಗಿದ್ದ ಮಗಳ ಸಾವಿನಿಂದ ತಂದೆಗೆ ಆಘಾತವಾಗಿದೆ.

ಆನ್ ಲೈನ್ ತರಗತಿಗಳಿಂದ ಖಿನ್ನತೆಗೆ ಒಳಗಾಗಿದ್ದ ಬಾಲಕಿ ವಿದ್ಯಾಭ್ಯಾಸ ಕುಂಠಿತವಾಗುವ ಆತಂಕದಿಂದ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಯುವಕನ ಕೊಲೆ ಮಾಡಿ ಶವ ಸುಟ್ಟು ಹಾಕಿದ ದುಷ್ಕರ್ಮಿಗಳು

ಕಳೆದ ವರ್ಷ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ. 92 ಅಂಕ ಪಡೆದಿದ್ದಳು.ಬನ್ನೂರು ಸರ್ಕಾರಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಶನಿವಾರ ಮಧ್ಯ ರಾತ್ರಿ ಮನೆಯಲ್ಲೇ ನೇಣಿಗೆ ಶರಣಾಗಿದ್ದಾಳೆ.

Advertisement

ಮಗಳ ಸಾವಿನಿಂದ ಮನನೊಂದು ತಂದೆ ರಾಜು ಲೋ ಬಿಪಿಯಿಂದ ಮೃತಪಟ್ಟಿದ್ದಾರೆ. ಮಳವಳ್ಳಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next