Advertisement

ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದ ಬೈಕ್: ಸವಾರ ಸ್ಥಳದಲ್ಲೇ ಸಾವು

06:07 PM Oct 04, 2021 | Team Udayavani |

ಸೊರಬ: ಬೈಕ್ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಆನವಟ್ಟಿಯಲ್ಲಿ ಸೋಮವಾರ ನಡೆದಿದೆ.

Advertisement

ತಾಲೂಕಿನ ಸಮನವಳ್ಳಿ ಗ್ರಾಮದ ಎಸ್.ಜಿ. ಕಾರ್ತಿಕ್ ಗುರಪ್ಪ ( 21) ಮೃತ ಬೈಕ್ ಸವಾರ. ಕೋಟಿಪುರ ಮಾರ್ಗವಾಗಿ ಆನವಟ್ಟಿಗೆ ತೆರಳುವ ಸಂದರ್ಭದಲ್ಲಿ ಬೈಕ್ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರನ ತಲೆಗೆ ತೀವ್ರತರನಾದ ಗಾಯವಾಗಿದ್ದು, ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಆನವಟ್ಟಿ‌ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ಕರ್ನಾಟಕ ರಕ್ಷಣಾ ವೇದಿಕೆಯ ಆನವಟ್ಟಿ ಯುವ ಘಟಕದ ಉಪಾಧ್ಯಕ್ಷರಾಗಿದ್ದ ಕಾರ್ತಿಕ್ ಹಲವಾರು ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next