Advertisement

ಸುಳ್ಯ: ಹೃದಯಾಘಾತದಿಂದ 2ನೇ ತರಗತಿ ವಿದ್ಯಾರ್ಥಿ ಸಾವು

07:30 PM Nov 03, 2022 | Team Udayavani |

ಸುಳ್ಯ: ಹೃದಯಾಘಾತದಿಂದ ಶಾಲಾ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಬುಧವಾರ ಸುಳ್ಯ ತಾಲೂಕಿನಲ್ಲಿ ಸಂಭವಿಸಿದೆ.

Advertisement

ಅಮರಮುಟ್ನೂರು ಗ್ರಾಮದ ಕುಕ್ಕುಜಡ್ಕ ಸ.ಹಿ.ಪ್ರಾ. ಶಾಲೆಯ 2ನೇ ತರಗತಿ ವಿದ್ಯಾರ್ಥಿ ಕುಂಟಿಕಾನದ ಮೋಕ್ಷಿತ್‌ ಕೆ.ಸಿ. (7) ಮೃತ ಬಾಲಕ.

ಬಾಲಕ ಎಂದಿನಂತೆ ಶಾಲೆಗೆ ಬಂದಿದ್ದು ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದನು. ಮಧ್ಯಾಹ್ನದ ವೇಳೆಗೆ ಸ್ವಲ್ಪ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶಿಕ್ಷಕರು ದೂರವಾಣಿ ಮೂಲಕ ಪೋಷಕರಿಗೆ ಮಾಹಿತಿ ನೀಡಿದರು. ತಂದೆ ಚಂದ್ರಶೇಖರ ಆಚಾರ್ಯ ಅವರು ಶಾಲೆಗೆ ಬಂದಿರುವ ಸಂದರ್ಭದಲ್ಲೇ ಬಾಲಕ ನಿಂತಲ್ಲಿಯೇ ಕುಸಿದು ಬಿದ್ದಿದ್ದು, ತತ್‌ಕ್ಷಣ ಸುಳ್ಯದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು, ವೈದ್ಯರು ಪರೀಕ್ಷಿಸಿದಾಗ ಬಾಲಕನಿಗೆ ಹೃದಯಾಘಾತ ಸಂಭವಿಸಿದ್ದರಿಂದ ಮೃತ ಪಟ್ಟಿರುವುದಾಗಿ ತಿಳಿಸಿದರು.

ಮೃತ ಬಾಲಕ ತಂದೆ, ತಾಯಿ, ಸಹೋದರನನ್ನು ಅಗಲಿದ್ದಾರೆ. ಚಿತ್ರ: ಮೋಕ್ಷಿತ್‌ ಕೆ.ಸಿ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next