ವಿಜಯಪುರ: ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡು ಮನೆಗೆ ಮರಳುತ್ತಿದ್ದಾಗ ಅಪರಿಚಿತ ಬೈಕ್ ಢಿಕ್ಕಿಯಾಗಿ ವಿದ್ಯಾರ್ಥಿ ಮೃತಪಟ್ಟ ಘಟನೆ ನಗರದಲ್ಲಿ ನಡೆದಿದೆ.
ನಿತುನ್ ಕಾಂಬಳೆ(7) ಮೃತ ವಿದ್ಯಾರ್ಥಿ.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸ್ವಾತಂತ್ರ್ಯೋತ್ಸವದಲ್ಲಿ ಪಾಲ್ಗೊಂಡು ಮನೆಗೆ ಮರಳುವಾಗ ಕ್ರೀಡಾಂಗಣದ ಪಕ್ಕದಲ್ಲೇ ಇರುವ ಶಾಪೇಟೆ ಬಳಿ ಅಪರಿಚಿತ ಸವಾರನ ಬೈಕ್ ಢಿಕ್ಕಿಯಾಗಿದೆ.
ಅಪಘಾತದ ಬಳಿಕ ಸವಾರ ಬೈಕ್ ಸಮೇತ ಪರಾರಿಯಾಗಿದ್ದಾನೆ. ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿಯನ್ನು ಕೂಡಲೇ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ವಿದ್ಯಾರ್ಥಿ ನಿತುನ್ ಮೃತಪಟ್ಟಿದ್ದಾನೆ.
ಈ ಕುರಿತು ನಗರದ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿ ಬೈಕ್ ಸವಾರನಿಗಾಗಿ ಶೋಧ ಆರಂಭಿಸಿದ್ದಾರೆ.