ವಿಟ್ಲ: ಯುವತಿಯೋರ್ವರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಕಟ್ಟೆ ಎಂಬಲ್ಲಿ ಸೋಮವಾರ (ಅ.11ರಂದು) ಸಂಭವಿಸಿದೆ.
ವಿಟ್ಲಕಸಬಾ ಗ್ರಾಮದ ನೆತ್ರಕೆರೆ ನಿವಾಸಿ ಬಾಬು ನಾಯ್ಕ ಅವರ ಪುತ್ರಿ ನಿಶ್ಮಿತಾ(22) ಆತ್ಮಹತ್ಯೆ ಮಾಡಿಕೊಂಡ ಯುವತಿ
ನಿಶ್ಮಿತಾ ಅವರು ಡೆಂಟಲ್ ಕ್ಲಿನಿಕ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದು, ನಿನ್ನೆ ಸಂಜೆಯಿಂದ ಕಾಣೆಯಾಗಿದ್ದರು. ಈ ಬಗ್ಗೆ ವಿಟ್ಲ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.
ಅ.11ರಂದು ಮುಂಜಾನೆ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದ್ದು, ಡೆತ್ ನೋಟ್ ಮತ್ತು ಮೊಬೈಲ್ ಕೂಡ ಮೃತದೇಹ ದೊರೆತ ಸ್ಥಳದಲ್ಲಿ ಪತ್ತೆಯಾಗಿದೆ. ಡೆತ್ ನೋಟ್ ನಲ್ಲಿ ಕೆಲವರ ಹೆಸರು ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯಾವ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿದ್ದಾರೆ ಎಂದು ತಿಳಿದುಬಂದಿಲ್ಲ. ಈ ಬಗ್ಗೆ ವಿಟ್ಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.