Advertisement
ಇದರಲ್ಲಿ ಕರ್ನಾಟಕದ ಮೂವರು ಯೋಧ ಸೇರಿ ಐವರು ಮೃತ ಪಟ್ಟಿದ್ದಾರೆ. ಈ ಪೈಕಿ ಓರ್ವ ಯೋಧ ಕುಂದಾಪುರ ಬೀಜಾಡಿಯ ಅನೂಪ್ ಪೂಜಾರಿ (31) ಹುತಾತ್ಮ ಯೋಧ. ಬೀಜಾಡಿ ನಿವಾಸಿ ಚಂದು ಪೂಜಾರಿ, ನಾರಾಯಣ ಪೂಜಾರಿ ದಂಪತಿಗಳ ಪುತ್ರ ಅನೂಪ್ ಪೂಜಾರಿ ಸೇನೆಗೆ ಸೇರಿ 13 ವರ್ಷವಾಗಿತ್ತು. ಅವರು ಮರಾಠ ಲೈಟ್ ಇನ್ಫೆಂಟ್ರಿ ಬಟಾಲಿಯನ್ ನಲ್ಲಿ ಸೇವೆ ಸಲ್ಲಿಸುತ್ತಿದ್ದರು.
Related Articles
Advertisement
ಡಿ.26 ರಂದು (ಗುರುವಾರ) ತೆಕ್ಕಟ್ಟೆಯಿಂದ ಪಾರ್ಥೀವ ಶರೀರವನ್ನು ತೆರೆದ ವಾಹನದಲ್ಲಿ ಕೋಟೇಶ್ವರ ಮೂಲಕವಾಗಿ ಮೆರವಣಿಗೆ ನಡೆಸಿ ಹುಟ್ಟೂರಾದ ಬೀಜಾಡಿಗೆ ಕರೆತಂದು ಸಕಲ ವಿಧಿಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲಾಗುತ್ತದೆ. ಬೀಜಾಡಿ ಪಡುಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ತೆ ಕಲ್ಪಿಸಲಾಗುತ್ತದೆ. ಸಮಾಜ ಸೇವಕ ಅಶೋಕ್ ಪೂಜಾರಿ ಬೀಜಾಡಿ, ಬೀಜಾಡಿ ಗ್ರಾ.ಪಂ ಅಧ್ಯಕ್ಷ ಪ್ರಕಾಶ್ ಪೂಜಾರಿ, ಗ್ರಾಮಸ್ತರ ನೇತೃತ್ವದಲ್ಲಿ ಅಂತಿಮ ಸಂಸ್ಕಾರಕ್ಕೆ ಸಿದ್ದತೆ ಮಾಡಲಾಗುತ್ತಿದೆ.
ಸೈನಿಕ ಅನೂಪ್ ಪೂಜಾರಿಯವರೊಂದಿಗೆ ಸೇವೆಯಲ್ಲಿ ಜೊತೆಗಿದ್ದು ಸದ್ಯ ರಜೆಯಲ್ಲಿರುವ ಚಿಕ್ಕೋಡಿಯ ಯೋಧ ಆಂಜನೇಯ ಪಾಟೀಲ್ ತನ್ನ ಸಹೋದರನೊಂದಿಗೆ ತಡರಾತ್ರಿ ಹೊರಟು ಬಂದು ಬೆಳಿಗ್ಗೆ ಮೃತ ಯೋಧನ ಮನೆಗೆ ಮಾಹಿತಿ ನೀಡಿದ್ದಾರೆ.
ಇನ್ನುಳಿದಂತೆ ಘಟನೆಯಲ್ಲಿ ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ತಾಲೂಕಿನ ಮಹಾಲಿಂಗಪುರ ನಿವಾಸಿ ಮಹೇಶ್ ಮಾರಿಗೊಂಡ (25) ಬೆಳಗಾವಿಯ ದಯಾನಂದ ಕಲ್ಲಪ್ಪ(45) ತಿರಕನ್ನವರ ಸಾವಿಗೀಡಾಗಿದ್ದಾರೆ.
ಇಬ್ಬರು ಮಹಾರಾಷ್ಟ್ರ ಮೂಲದ ಯೋಧರು ಈ ದುರಂತದಲ್ಲಿ ಸಾವಿಗೀಡಾಗಿದ್ದಾರೆ.
ಘಟನೆಯಲ್ಲಿ ಕೆಲ ಯೋಧರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.