Advertisement

Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್‌ ಹುತಾತ್ಮ

01:20 PM Dec 25, 2024 | Team Udayavani |

ಕುಂದಾಪುರ: ಮಂಗಳವಾರ (ಡಿ.24ರಂದು) ಜಮ್ಮು ಕಾಶ್ಮೀರದ ಮೇಂಧರ್‌ನಲ್ಲಿ 300 ಅಡಿ ಆಳದ ಕಮರಿಗೆ ಸೇನಾ ವಾಹನ ಉರುಳಿ ಬಿದ್ದು ಐವರು ಯೋಧರು ಹುತಾತ್ಮರಾಗಿದ್ದು, ಮೃತ ಕುಟುಂಬದವರ ಆಕ್ರದನ ಮುಗಿಲು ಮುಟ್ಟಿದೆ.

Advertisement

ಇದರಲ್ಲಿ ಕರ್ನಾಟಕದ ಮೂವರು ಯೋಧ ಸೇರಿ ಐವರು ಮೃತ ಪಟ್ಟಿದ್ದಾರೆ. ಈ ಪೈಕಿ ಓರ್ವ ಯೋಧ ಕುಂದಾಪುರ ಬೀಜಾಡಿಯ ಅನೂಪ್ ಪೂಜಾರಿ (31) ಹುತಾತ್ಮ ಯೋಧ. ಬೀಜಾಡಿ ನಿವಾಸಿ ಚಂದು ಪೂಜಾರಿ, ನಾರಾಯಣ ಪೂಜಾರಿ ದಂಪತಿಗಳ ಪುತ್ರ ಅನೂಪ್ ಪೂಜಾರಿ ಸೇನೆಗೆ ಸೇರಿ 13 ವರ್ಷವಾಗಿತ್ತು. ಅವರು ಮರಾಠ ಲೈಟ್ ಇನ್ಫೆಂಟ್ರಿ ಬಟಾಲಿಯನ್ ನಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಹುತಾತ್ಮರಾಧ ಯೋಧ ಅನೂಪ್ ಅವರಿಗೆ ವಿವಾಹವಾಗಿದ್ದು 2 ವರ್ಷದ ಹೆಣ್ಣು ಮಗುವಿದೆ. ಕಳೆದ ತಿಂಗಳು ರಜೆಗೆ ಆಗಮಿಸಿದ್ದ ಅವರು ಡಿ.15 ರಂದು ಕೋಟೇಶ್ವರದಲ್ಲಿ ನಡೆದ ಕೊಡಿ ಹಬ್ಬದಲ್ಲಿ ಪಾಲ್ಗೊಂಡಿದ್ದಲ್ಲದೆ, ಮಗಳ ಹುಟ್ಟುಹಬ್ಬವನ್ನು ಆಚರಿಸಿದ್ದರು.

ಇದನ್ನೂ ಓದಿ: Belagavi: ಕಾಶ್ಮೀರದಲ್ಲಿ 300 ಅಡಿ ಆಳದ ಕಂದಕಕ್ಕೆ ಬಿದ್ದ ಸೇನಾ ವಾಹನ; ಯೋಧರು ಹುತಾತ್ಮ

ಹುತ್ಮಾತ ಯೋಧ ತಾಯಿ, ಇಬ್ಬರು ಸಹೋದರಿಯರು, ಪತ್ನಿ, ಪುತ್ರಿ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ

Advertisement

ಡಿ.26 ರಂದು (ಗುರುವಾರ) ತೆಕ್ಕಟ್ಟೆಯಿಂದ ಪಾರ್ಥೀವ ಶರೀರವನ್ನು ತೆರೆದ ವಾಹನದಲ್ಲಿ ಕೋಟೇಶ್ವರ ಮೂಲಕವಾಗಿ ಮೆರವಣಿಗೆ ನಡೆಸಿ ಹುಟ್ಟೂರಾದ ಬೀಜಾಡಿಗೆ ಕರೆತಂದು ಸಕಲ ವಿಧಿಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲಾಗುತ್ತದೆ. ಬೀಜಾಡಿ ಪಡುಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ತೆ ಕಲ್ಪಿಸಲಾಗುತ್ತದೆ. ಸಮಾಜ ಸೇವಕ ಅಶೋಕ್ ಪೂಜಾರಿ ಬೀಜಾಡಿ, ಬೀಜಾಡಿ ಗ್ರಾ.ಪಂ ಅಧ್ಯಕ್ಷ ಪ್ರಕಾಶ್ ಪೂಜಾರಿ, ಗ್ರಾಮಸ್ತರ ನೇತೃತ್ವದಲ್ಲಿ ಅಂತಿಮ ಸಂಸ್ಕಾರಕ್ಕೆ ಸಿದ್ದತೆ ಮಾಡಲಾಗುತ್ತಿದೆ.

ಸೈನಿಕ ಅನೂಪ್ ಪೂಜಾರಿಯವರೊಂದಿಗೆ ಸೇವೆಯಲ್ಲಿ ಜೊತೆಗಿದ್ದು ಸದ್ಯ ರಜೆಯಲ್ಲಿರುವ ಚಿಕ್ಕೋಡಿಯ ಯೋಧ ಆಂಜನೇಯ ಪಾಟೀಲ್ ತನ್ನ ಸಹೋದರನೊಂದಿಗೆ ತಡರಾತ್ರಿ ಹೊರಟು ಬಂದು ಬೆಳಿಗ್ಗೆ ಮೃತ ಯೋಧನ ಮನೆಗೆ ಮಾಹಿತಿ ನೀಡಿದ್ದಾರೆ.

ಇನ್ನುಳಿದಂತೆ ಘಟನೆಯಲ್ಲಿ ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ತಾಲೂಕಿನ ಮಹಾಲಿಂಗಪುರ ನಿವಾಸಿ ಮಹೇಶ್ ಮಾರಿಗೊಂಡ (25) ಬೆಳಗಾವಿಯ ದಯಾನಂದ‌ ಕಲ್ಲಪ್ಪ(45) ತಿರಕನ್ನವರ ಸಾವಿಗೀಡಾಗಿದ್ದಾರೆ.

ಇಬ್ಬರು ಮಹಾರಾಷ್ಟ್ರ ಮೂಲದ ಯೋಧರು ಈ ದುರಂತದಲ್ಲಿ ಸಾವಿಗೀಡಾಗಿದ್ದಾರೆ.

ಘಟನೆಯಲ್ಲಿ ಕೆಲ ಯೋಧರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next