Advertisement

ಬೆಳ್ಳಂಬೆಳ್ಳಗ್ಗೆ ದುರಂತ: ಬೈಕ್ ಗೆ ಟಿಪ್ಪರ್ ಢಿಕ್ಕಿಯಾಗಿ ತಾಯಿ – ಮಗು ಸಾವು

12:31 PM Oct 25, 2021 | Team Udayavani |

ಬೆಂಗಳೂರು: ಬೈಕ್ ಗೆ ಟಿಪ್ಪರ್  ಢಿಕ್ಕಿಯಾಗಿ ತಾಯಿ- ಮಗು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಮಾರತ್ ಹಳ್ಳಿಯ ಹೊರವರ್ತುಲ ರಸ್ತೆಯಲ್ಲಿ ಸೋಮವಾರ ನಡೆದಿದೆ.

Advertisement

ಶ್ರೀದೇವಿ(21), ದೀಕ್ಷಿತ(1) ಮೃತ ದುರ್ಧೈವಿಗಳು.

ಕುಟುಂಬ ಸಮೇತ ತಮಿಳುನಾಡಿಗೆ ಹೋಗುತ್ತಿದ್ದ ವೇಳೆ ಬುಲೆಟ್ ಬೈಕ್ ಗೆ ಟಿಪ್ಪರ್ ಢಿಕ್ಕಿಯಾಗಿ, ಬೈಕ್ ನಲ್ಲಿದ್ದ ದಂಪತಿ ಕೆಳೆಗೆ ಬಿದ್ದಿದ್ದಾರೆ. ಈ ವೇಳೆ ಟಿಪ್ಪರ್ ತಾಯಿ – ಮಗುವಿನ ಮೇಲೆ  ಹರಿದು ತಾಯಿ- ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಶಿವಕುಮಾರ್ ಗಾಯಗೊಂಡಿದ್ದಾರೆ. ಹೆಲ್ಮೆಟ್ ಧರಿಸಿದ್ದರಿಂದ ಶಿವಕುಮಾರ್ ದುರ್ಘಟನೆಯಿಂದ ಪಾರಾಗಿದ್ದಾರೆ.

ಹೆಚ್ ಎಎಲ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಗ ಕಾರಣರಾದ ಟಿಪ್ಪರ್ ಚಾಲಕನನ್ನು ವಶಕ್ಕೆ‌ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next