Advertisement

Tragic: ಕಾರಿನ ಅಪಘಾತವನ್ನು ನೋಡಲು ಹೋದವರ ಮೇಲೆ ಹರಿದ ಮತ್ತೊಂದು ಕಾರು; 9 ಮಂದಿ ದುರ್ಮರಣ

08:40 AM Jul 20, 2023 | Team Udayavani |

ಗುಜರಾತ್:‌ ಕಾರು ಹರಿದು ಪೊಲೀಸ್‌ ಕಾನ್ಸ್‌ ಟೇಬಲ್‌ ಸೇರಿದಂತೆ 9 ಮಂದಿ ಮೃತಪಟ್ಟಿರುವ ಭೀಕರ ಘಟನೆ ಗುರುವಾರ (ಜು.20 ರಂದು) ಅಹಮದಾಬಾದ್‌ನ ಇಸ್ಕಾನ್ ಸೇತುವೆ ಬಳಿ ನಡೆದಿದೆ.

Advertisement

ತಡರಾತ್ರಿ 1:30 ರ ಹೊತ್ತಿ ಈ ಘಟನೆ ನಡೆದಿದ್ದು, ಸರ್ಖೇಜ್-ಗಾಂಧಿನಗರ (ಎಸ್‌ಜಿ) ಹೆದ್ದಾರಿಯಲ್ಲಿನ ಇಸ್ಕಾನ್ ಸೇತುವೆ ಬಳಿ ಥಾರ್ ಮತ್ತು ಡಂಪರ್ ಟ್ರಕ್‌ ನಡುವೆ ಅಪಘಾತವೊಂದು ಸಂಭವಿಸಿದೆ. ಈ ಅಪಘಾತದ ಭೀಕರತೆಯನ್ನು ನೋಡಲು ಹತ್ತಾರು ಮಂದಿ ಸೇರಿದ್ದಾರೆ. ಪೊಲೀಸರು ಕೂಡ ಘಟನಾ ಸ್ಥಳಕ್ಕೆ ತಲುಪಿದ್ದಾರೆ. ಆದರೆ ಇದೇ ವೇಳೆ ಮತ್ತೊಂದು ಭೀಕರ ಘಟನೆ ನಡೆದಿದೆ.

ವೇಗವಾಗಿ ಬಂದ ಜಾಗ್ವಾರ್‌ ಕಾರು ಅಪಘಾತದ ಸ್ಥಳದಲ್ಲಿ ನೆರದಿದ್ದ ಜನರ ಮೇಲೆ ಏಕಾಏಕಿ ಹರಿದಿದೆ. ಪರಿಣಾಮ 9 ಮಂದಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇಬ್ಬರು ಪೊಲೀಸ್‌ ಸಿಬ್ಬಂದಿಗಳು ಮೃತಪಟ್ಟಿದ್ದಾರೆ. ಕಾರು 160 km ವೇಗದಲ್ಲಿ ಬಂದು ಜನರ ಮೇಲೆ ಹರಿದಿದೆ ಎಂದು ವರದಿ ತಿಳಿಸಿದೆ.

ಒಟ್ಟು 12 ಜನರನ್ನು ಆಸ್ಪತ್ರೆಗೆ ರವಾನಿಸಲಾಗಿತ್ತು ಅದರಲ್ಲಿ 9 ಮಂದಿ ಮೃತಪಟ್ಟಿದ್ದಾರೆ. ಉಳಿದವರಿಗೆ ಚಿಕಿತ್ಸೆ ಮುಂದುವರೆದಿದೆ ಎಂದು ಸೋಲಾ ಸಿವಿಲ್ ಆಸ್ಪತ್ರೆಯ ವೈದ್ಯಾಧಿಕಾರಿ ಕೃಪಾ ಪಟೇಲ್ ಎಎನ್‌ ಐಗೆ ತಿಳಿಸಿದ್ದಾರೆ.

ಘಟನೆಯಲ್ಲಿ ಜಾಗ್ವಾರ್‌ ಕಾರು ಚಾಲಕ ಕೂಡ ಗಾಯಗೊಂಡಿದ್ದಾನೆ ಎಂದು ವರದಿ ತಿಳಿಸಿದೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next