Advertisement

ಸದ್ದು ಮಾಡುತ್ತಿದೆ ಹರ್ಷಿಕಾ ಪೂಣಚ್ಛ ನಟನೆಯ ‘ಸ್ತಬ್ಧ’ ಟ್ರೇಲರ್

02:17 PM May 23, 2023 | Team Udayavani |

ಹರ್ಷಿಕಾ ಪೂಣಚ್ಛ ನಾಯಕಿಯಾಗಿರುವ “ಸ್ತಬ್ಧ’ ಚಿತ್ರದ ಟ್ರೇಲರ್‌ ಇತ್ತೀಚೆಗೆ ಬಿಡುಗಡೆಯಾಗಿದೆ. ಡಾ.ವಿದ್ಯಾಸಾಗರ್‌ ಅವರು ನಿರ್ಮಿಸಿರುವ, ಲಾಲಿ ರಾಘವ ನಿರ್ದೇಶನದಲ್ಲಿ ಪ್ರತಾಪ್‌ ಸಿಂಹ ನಾಯಕರಾಗಿ ಈ ಚಿತ್ರದಲ್ಲಿ ನಟಿಸಿದ್ದಾರೆ.

Advertisement

ಟ್ರೇಲರ್‌ ರಿಲೀಸ್‌ ಬಳಿಕ ಮಾತನಾಡಿದ ರಾಘವೇಂದ್ರರಾಜ್‌ಕುಮ್‌, “ಪ್ರತಾಪ್‌ ಸಿಂಹ ನಾಯಕರಾಗಿ ನಟಿಸಿರುವ ಈ ಚಿತ್ರದ ಟ್ರೇಲರ್‌ ಹಾಗೂ ಹಾಡುಗಳು ಚೆನ್ನಾಗಿದೆ. ನಾನು ಕೂಡ ಈ ಚಿತ್ರದಲ್ಲಿ ಅಭಿನಯಿಸಿದ್ದೇನೆ. ಚಿತ್ರಕ್ಕೆ ಒಳ್ಳೆಯದಾಗಲಿ’ ಎಂದರು.

“ಸ್ಥಬ್ಧ ಇದೊಂದು ಭ್ರಮೆಯ ಸುತ್ತ ನಡೆಯುವ ಕಥೆ. ಹಾರರ್‌, ಸಸ್ಪೆನ್ಸ್ ಥ್ರಿಲ್ಲರ್‌ ಎನ್ನಬಹುದು. 45 ದಿನಗಳ ಕಾಲ ಬೆಂಗಳೂರು, ಮಂಗಳೂರು, ಉಡುಪಿಯಲ್ಲಿ ಚಿತ್ರೀಕರಣ ನಡೆದಿದೆ. ಹರ್ಷಿಕಾ ಪೂಣತ್ಛ, ರಾಘವೇಂದ್ರ ರಾಜಕುಮಾರ್‌, ಪ್ರಿಯಾಂಕ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ನಿರ್ದೇಶಕ ಲಾಲಿ ರಾಘವ ಸೇರಿದಂತೆ ಎಲ್ಲಾ ತಂತ್ರಜ್ಞರ ಕಾರ್ಯವೈಖರಿ ಚೆನ್ನಾಗಿದೆ. ಜೂನ್‌ 9 ರಂದು ಚಿತ್ರ ಬಿಡುಗಡೆಯಾಗಲಿದೆ ನೋಡಿ ಹಾರೈಸಿ’ ಎಂದರು ನಾಯಕ ಪ್ರತಾಪ್‌ ಸಿಂಹ. ನಿರ್ದೇಶಕರು ಹಾಗೂ ನಿರ್ಮಾಪಕರು ಕೂಡಾ ಸಿನಿಮಾ ಬಗ್ಗೆ ಖುಷಿ ಹಂಚಿಕೊಂಡರು.

ತಮ್ಮ ಪಾತ್ರದ ಬಗ್ಗೆ ನಾಯಕಿ ಹರ್ಷಿಕಾ ಪೂಣತ್ಛ ಮಾಹಿತಿ ನೀಡಿದರು. ನಟ ಭಜರಂಗಿ ಪ್ರಸನ್ನ, ಸಂಗೀತ ನಿರ್ದೇಶಕ ಆರವ್‌ ರಿಷಿಕ್‌, ಛಾಯಾಗ್ರಹಕ ಪಿ.ವಿ.ಆರ್‌ ಸ್ವಾಮಿ ಮುಂತಾದವರು ಚಿತ್ರದ ಕುರಿತು ಮಾತನಾಡಿದರು

Advertisement

Udayavani is now on Telegram. Click here to join our channel and stay updated with the latest news.

Next