Advertisement

Train;ತಿರುವನಂತಪುರ-ಕಾಸರಗೋಡು ವಂದೇ ಭಾರತ್ ಎಕ್ಸ್ ಪ್ರೆಸ್ ಮಂಗಳೂರುವರೆಗೆ ವಿಸ್ತರಣೆ

06:52 PM Feb 21, 2024 | Team Udayavani |

ಮಂಗಳೂರು: ತಿರುವನಂತರಪುರ-ಕಾಸರಗೋಡು ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲನ್ನು ಮಂಗಳೂರಿನವರೆಗೆ ವಿಸ್ತರಣೆ ಮಾಡಲಾಗಿದೆ.

Advertisement

ರೈಲ್ವೆ ಮಂಡಳಿ ಬುಧವಾರ ಹೊರಡಿಸಿರುವ ಆದೇಶದ ಪ್ರಕಾರ ವಂದೇ ಭಾರತ್ ರೈಲು. ನಂ. 20632/20631 ಇನ್ನು ಮುಂದೆ ತಿರುವನಂತಪುರ-ಮಂಗಳೂರು ನಡುವೆ ಸಂಚರಿಸಲಿದೆ. ಹೊಸ ರೈಲ್ವೆ ವೇಳಾ ಪಟ್ಟಿಯಂತೆ ಈ ರೈಲು ಮಂಗಳೂರಿನಿಂದ ಬೆಳಗ್ಗೆ 06.15ಕ್ಕೆ ಹೊರಟು ಅಪರಾಹ್ನ 3.05 ಕ್ಕೆ ತಿರುವನಂತಪುರವನ್ನು ತಲುಪಲಿದೆ. ಹಾಗೆಯೇ ತಿರುವನಂತಪುರದಿಂದ ಸಂಜೆ 4.05 ಕ್ಕೆ ಬಿಟ್ಟು ಮಂಗಳೂರನ್ನು ರಾತ್ರಿ 12.40ಕ್ಕೆ ತಲುಪಲಿದೆ. ಬುಧವಾರವನ್ನು ಹೊರತು ಪಡಿಸಿ ವಾರ ಆರು ದಿನಗಳಲ್ಲಿ ವಂದೇ ಭಾರತ್ ರೈಲು ಸಂಚರಿಸಲಿದೆ.

ನನ್ನ ಮನವಿ ಪುರಸ್ಕರಿಸಿ ವಂದೇ ಭಾರತ್ ರೈಲನ್ನು ಮಂಗಳೂರು ವರೆಗೆ ವಿಸ್ತರಿಸಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಸಂಸದ ನಳಿನ್ ಕುಮಾರ್ ಕಟೀಲ್ ಕೃತಜ್ಞತೆ ಸಲ್ಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next