Advertisement

ಬಿಎಂಟಿಸಿ ಚಾಲಕರಿಗೆ ತರಬೇತಿ

11:51 AM Dec 19, 2017 | Team Udayavani |

ಬೆಂಗಳೂರು: ಮತ್ತಷ್ಟು ಪ್ರಯಾಣಿಕ ಸ್ನೇಹಿ ಸೇವೆ ಕಲ್ಪಿಸಲು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) 600ಕ್ಕೂ ಅಧಿಕ ಚಾಲಕರಿಗೆ ಭಾನುವಾರ ಒಂದು ದಿನದ “ಪರಿಣಾಮಕಾರಿ ಸಂಪರ್ಕ ಕೌಶಲ್ಯ ಮತ್ತು ವ್ಯಕ್ತಿತ್ವ ವಿಕಸನ’ ತರಬೇತಿ ನೀಡಲಾಯಿತು. 

Advertisement

ಕತ್ರಿಗುಪ್ಪೆ ಘಟಕದ ಹಿಂಭಾಗದಲ್ಲಿರುವ ವೆಂಕಟಾದ್ರಿ ಸಮುದಾಯ ಭವನದಲ್ಲಿ ಬಿಎಂಟಿಸಿ ಹಮ್ಮಿಕೊಂಡಿದ್ದ ಶಿಬಿರದಲ್ಲಿ ಪ್ರಯಾಣಿಕರೊಂದಿಗೆ ಸೌಜನ್ಯಯುತ ವರ್ತನೆ, ಮಹಿಳಾ ಪ್ರಯಾಣಿಕರ ಸುರಕ್ಷತೆಗೆ ಆದ್ಯತೆ, ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದು, ಸುರಕ್ಷಿತ ಮತ್ತು ಗುಣಮಟ್ಟದ ಸಾರಿಗೆ ವ್ಯವಸ್ಥೆ, ಮಾಹಿತಿ ತಂತ್ರಜ್ಞಾನ ಬಳಕೆ ಕುರಿತು ತರಬೇತಿ ನೀಡಲಾಯಿತು. 

ನ್ಯಾಷನಲ್‌ ಬೋರ್ಡ್‌ ಫಾರ್‌ ವರ್ಕರ್ ಎಜುಕೇಷನ್‌ ಆಂಡ್‌ ಡೆವಲಪ್‌ಮೆಂಟ್‌, ಮ್ಯಾಕ್ಸ್‌ ಬ್ರೈಟ್‌ ಇನ್‌ಸ್ಟಿಟ್ಯೂಟ್‌ ಆಫ್ ಟ್ರೈನಿಂಗ್‌ ಸೇರಿದಂತೆ ಹಲವು ಸಂಸ್ಥೆಗಳ ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಿದ್ದರು. ಸಂಸ್ಥೆಯಲ್ಲಿ ಒಟ್ಟಾರೆ 27 ಸಾವಿರ ಚಾಲನಾ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದು, ಈ ಪೈಕಿ 600ರಿಂದ 800 ಸಿಬ್ಬಂದಿಗೆ ಮೊದಲ ಹಂತದಲ್ಲಿ ತರಬೇತಿ ನೀಡಲಾಗುತ್ತಿದೆ.

ಹಂತ-ಹಂತವಾಗಿ ಉಳಿದೆಲ್ಲ ಸಿಬ್ಬಂದಿಗೂ ವಿಸ್ತರಿಸಲಾಗುವುದು ಎಂದು ಬಿಎಂಟಿಸಿ ನಿರ್ದೇಶಕ (ಭದ್ರತೆ ಮತ್ತು ಜಾಗೃತಿ) ಡಾ.ಎ.ಎನ್‌.ಪ್ರಕಾಶ್‌ಗೌಡ ತಿಳಿಸಿದರು. ಕಾಲ ಕಾಲಕ್ಕೆ ಬದಲಾಗುತ್ತಿರುವ ಪರಿಸ್ಥಿತಿ ಮತ್ತು ತಂತ್ರಜ್ಞಾನಕ್ಕೆ ತಕ್ಕಂತೆ ಸಂಸ್ಥೆಯ ಮಾನವ ಸಂಪನ್ಮೂಲದ ಕೌಶಲ್ಯ, ಜ್ಞಾನ ಮತ್ತು ವ್ಯಕ್ತಿತ್ವ ವಿಕಸನಗೊಳಿಸುವುದು ಅತ್ಯಗತ್ಯ. ಈ ಮೂಲಕ ಬದಲಾದ ಪರಿಸ್ಥಿತಿಗಳನ್ನು ಸಮರ್ಪಕವಾಗಿ ನಿಭಾಯಿಸಲು ಅನುಕೂಲ ಆಗಲಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next