Advertisement
ನಗರದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಶನಿವಾರ ಹಮ್ಮಿಕೊಂಡಿದ್ದ ವಿಕಾಸ ಅಕಾಡೆಮಿ ಸಂಚಾಲಕರ ಹಾಗೂ ಪ್ರಮುಖರ ಸಭೆಯಲ್ಲಿ ಅವರು ಮಾತನಾಡಿದರು. ನಮ್ಮ ದೇಶ ಕೃಷಿ ಪ್ರಧಾನವಾಗಿದೆ. ಗ್ರಾಮೀಣ ಜನರು ಪರಿಶ್ರಮದಿಂದ ಸ್ವಾವಲಂಬನೆ ಬದುಕು ರೂಪಿಸಿಕೊಂಡಾಗ ಮಾತ್ರ ಬದಲಾವಣೆ ಕಾಣಲು ಸಾಧ್ಯ. ಹಾಗಾಗಿ ಸೇಡಂನಲ್ಲಿ ಮತ್ತು ಕಲಬುರಗಿಯಲ್ಲಿ ಶಿಕ್ಷಣ, ಆರೋಗ್ಯ, ಗ್ರಾಮೀಣ-ನಗರ ಅಭಿವೃದ್ಧಿ, ಸಮಗ್ರ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ, ಜಲ ಮತ್ತು ಆಧುನಿಕ ತಂತ್ರಜ್ಞಾನ ಬಳಕೆ, ಸ್ವ-ಉದ್ಯೋಗ, ಮಹಿಳೆ, ಮಕ್ಕಳು ಮತ್ತು ಸಂಸ್ಕೃತಿ, ಯುವ ಶಕ್ತಿ ಸದ್ಬಳಕೆ, ವೃತ್ತಿ ಶಿಕ್ಷಣಕ್ಕಾಗಿ ಸಮಾಲೋಚನೆ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ತರಬೇತಿ ಆಯೋಜಿಸಲಾಗಿದೆ. ಬಳಿಕ ಯುವಕರು ತಮ್ಮ ಗ್ರಾಮ ಸೇರಿದಂತೆ ಇತರೆ ಭಾಗಗಳಲ್ಲಿ ಕೆಲಸ ಕಾರ್ಯ ಮಾಡುವುದರಿಂದ ಬದಲಾವಣೆ ಕಾಣುವ ನಿರೀಕ್ಷೆ ಹೊಂದಿದ್ದೇವೆ ಎಂಬ ಆಶಯ ವ್ಯಕ್ತಪಡಿಸಿದರು.
Advertisement
ಸೆ.6ರಿಂದ ನಿರುದ್ಯೋಗಿ ಯುವಕರಿಗೆ ತರಬೇತಿ
04:19 PM Aug 30, 2020 | Suhan S |
Advertisement
Udayavani is now on Telegram. Click here to join our channel and stay updated with the latest news.