Advertisement

ಸ್ವ್ಯಾಬ್ ಪರೀಕ್ಷೆಗೆ ವಿಜ್ಞಾನ ವಿದ್ಯಾರ್ಥಿಗಳಿಗೆ ತರಬೇತಿ

07:56 AM Aug 04, 2020 | Suhan S |

ಬೆಂಗಳೂರು: ಕೋವಿಡ್‌ 19 ಪರೀಕ್ಷೆಯನ್ನು ಹೆಚ್ಚಿಸಲಾಗುತ್ತಿದ್ದು, ಸ್ವ್ಯಾಬ್‌ ಸಂಗ್ರಹಣೆಗೆ ವಿಜ್ಞಾನ ಹಿನ್ನೆಲೆಯುಳ್ಳ ಬಿ.ಎಸ್ಸಿ ಅಂತಿಮ ವರ್ಷದ ವಿದ್ಯಾರ್ಥಿ ಗಳಿಗೆ ತರಬೇತಿ ನೀಡಿ ಜಿಲ್ಲೆಯಲ್ಲಿ ನಿಯೋಜಿಸಿ ಕೊಳ್ಳುವಂತೆ ರಾಮನಗರ ಜಿಲ್ಲಾಡಳಿತಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ ಸಲಹೆ ನೀಡಿದ್ದಾರೆ.

Advertisement

ಸೋಮವಾರ ವಿಡಿಯೋ ಕಾನ್ಫರೆನ್ಸ್‌ ಮೂಲಕ ರಾಮನಗರ ಜಿಲ್ಲಾಡಳಿತದ ಜತೆ ಚರ್ಚೆ ಮಾಡಿದ ಅವರು, ರಾಮನಗರ ಜಿಲ್ಲೆಯ 69 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್‌-19 ಪರೀಕ್ಷೆಯ ಸ್ವ್ಯಾಬ್‌ ‌ ಸಂಗ್ರಹಣೆ ಕೇಂದ್ರಗಳನ್ನು ತೆರೆದು ತರಬೇತಿ ನೀಡಲಾಗುವ ವಿದ್ಯಾರ್ಥಿಗಳನ್ನು ನಿಯೋಜಿಸಿಕೊಳ್ಳಬೇಕು. ಜಿಲ್ಲೆಯಲ್ಲಿ ಕೋವಿಡ್‌ -19 ಲಕ್ಷಣವುಳ್ಳ ರೋಗಿ ಪರೀಕ್ಷೆಗೆ ಒಳಪಡಲು ಯಾವುದೇ ಸಮಸ್ಯೆಯಾಗಬಾರದು ಎಂದು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಕೋವಿಡ್‌-19 ಪರೀಕ್ಷೆಗೆ ಒಳಪಟ್ಟವರಿಗೆ 24 ಗಂಟೆಯೊಳಗೆ ಪರೀಕ್ಷೆಯ ವರದಿ ನೀಡಬೇಕು. ಪರೀಕ್ಷೆಯ ವರದಿ ಬ್ಯಾಕ್ಲಾಗ್‌ ಆಗದಂತೆ ಎಚ್ಚರ ವಹಿಸಬೇಕು. ಕೋವಿಡ್‌-19 ಪರೀಕ್ಷೆ ರೋಗಿಗಳನ್ನು ಒಳಪಡಿಸುವಾಗ ಸರಿಯಾದ ವಿಳಾಸ ಪಡೆಯಬೇಕು. ಇಲ್ಲಾವಾದಲ್ಲಿ ಪಾಸಿಟಿವ್‌ ಬಂದ ಸಂದರ್ಭದಲ್ಲಿ ಪತ್ತೆಹಚ್ಚುವುದುಕಷ್ಟವಾಗುತ್ತದೆ ಹಾಗೂ ರೋಗ ಹರಡುವುದು ಎಂದರು.

ಜಿಲ್ಲೆಯಲ್ಲಿ ನಿರ್ಮಾಣವಾಗುತ್ತಿರುವ ಜಿಲ್ಲಾಸ್ಪತ್ರೆಗೆ ಹೆಚ್ಚುವರಿ ಕಟ್ಟಡ ಮತ್ತು ಉಪಕರಣಗಳ ಅವಶ್ಯಕತೆ ಇದ್ದಲ್ಲಿ ಸೂಕ್ತ ಪ್ರಸ್ತಾವನೆ ಸಲ್ಲಿಸಿ. ಮಂಡ್ಯ ಜಿಲ್ಲೆಯ ನಂತರ ಬೆಂಗಳೂರಿಗೆ ತಲುಪುವವರೆಗೂ ಮೈಸೂರು -ಬೆಂಗಳೂರು ಹೆದ್ದಾರಿಯಲ್ಲಿ ಯಾವುದೇ ಟ್ರಾಮಾ ಸೆಂಟರ್‌ ಇಲ್ಲ. ಜಿಲ್ಲಾಸ್ಪತ್ರೆಯಲ್ಲಿ ಟ್ರಾಮಾ ಸೆಂಟರ್‌ ಸೇರಿದಂತೆ ಆಸ್ಪತ್ರೆಗೆ ಬೇಕಿರುವ ಸಿಬ್ಬಂದಿ, ಸಲಕರಣೆ ಗಳ ವಿವರದ ಮಾಹಿತಿಯನ್ನು ಸಲ್ಲಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಿರಂಜನ್‌ ಮಾತನಾಡಿ, 1273 ಕೋವಿಡ್‌ ಪಾಸಿಟಿವ್‌ ಪ್ರಕರಣ ಗಳಿದ್ದು, 566 ಮಂದಿ ಗುಣಮುಖರಾಗಿದ್ದಾರೆ. 690 ಸಕ್ರಿಯ ಪ್ರಕರಣಗಳಿದ್ದು, 17 ಜನ ಮೃಪಟ್ಟಿದ್ದಾರೆ ಎಂದು ಮಾಹಿತಿ ನೀಡಿದರು.

ಜಿಲ್ಲಾಧಿಕಾರಿ ಎಂ.ಎಸ್‌.ಅರ್ಚನಾ, ಜಿಪಂ ಮುಖ್ಯಕಾರ್ಯ ನಿರ್ವಹಣಾಧಿಕಾರಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ, ಅಪರ ಜಿಲ್ಲಾಧಿಕಾರಿ ಸೇರಿ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next