ಚಿಕ್ಕಬಳ್ಳಾಪುರ: ಕೌಶಲ್ಯಾಭಿವೃದ್ಧಿ ಇಲಾಖೆಯಿಂದಅನು ಷ್ಠಾನಗೊಳ್ಳುತ್ತಿರುವ ಡೇ-ನಲ್ಮ್ ಯೋಜನೆಯ ಎಸ್ .ಇ.ಪಿ.(ಐ),ಎಸ್.ಇ.ಪಿ.(ಜಿ), ಎಸ್.ಇ.ಪಿ. (ಸಿಎಲ್) ಉಪಘಟಕಗಳಡಿ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಈಗಾಗಲೇ ಸರ್ಕಾರದಿಂದ ನೀಡಿರುವ ಗುರಿಗೆ ಅನುಗುಣವಾಗಿ ಅರ್ಜಿಗಳನ್ನು ಬ್ಯಾಂಕ್‌ಗೆ ಸಲ್ಲಿಸಿದ್ದು, ಸದರಿ ಅರ್ಜಿಗಳ ಎಲ್ಲಾ ಫಲಾನುಭವಿಗಳಿಗೆ ಮಾ. 31ರೊಳಗಾಗಿ ಸಾಲ ಮಂಜೂರಾತಿ ಸೌಲಭ್ಯವನ್ನು ಒದಗಿಸುವಂತೆ ಸಂಬಂಧಪಟ್ಟ ಬ್ಯಾಂಕ್ ವ್ಯವಸ್ಥಾಪಕರಿಗೆ ಜಿಲ್ಲಾಧಿಕಾರಿ ಆರ್.ಲತಾ ತಾಕೀತು ಮಾಡಿದರು.
ಜಿಲ್ಲಾಡಳಿತ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಂಯುಕ್ತಾಶ್ರಯದಲ್ಲಿ ಜಿಪಂ ಸಭಾಂಗಣದಲ್ಲಿ ಡೇ-ನಲ್ಮ್ ಯೋಜನೆಯ ಅನುಷ್ಠಾನ ಕುರಿತು ನಗರಸಭೆ, ಪುರಸಭೆ, ಪಪಂ ವ್ಯಾಪ್ತಿಯ ಬ್ಯಾಂಕ್ ವ್ಯವಸ್ಥಾಪಕರು ಹಾಗೂ ಪೌರಾಯುಕ್ತರು/ ಮುಖ್ಯಾಧಿಕಾರಿಗಳಿಗೆ ಆಯೋಜಿಸಲಾಗಿದ್ದ ತರಬೇತಿ ಉದ್ಘಾಟಿಸಿ ಮಾತನಾಡಿದರು.
ದೀನದಯಾಳ್ ಅಂತ್ಯೋದಯ ಯೋಜನೆ- ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದ ಸ್ವಯಂ ಉದ್ಯೋಗ ಕಾರ್ಯಕ್ರಮದ ಉಪಘಟಕದಡಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ನಿಗದಿತ ಸಮ ಯದ ಒಳಗಾಗಿ ಸರ್ಕಾರದ ವಿವಿಧ ಯೋಜನೆ ಗಳಡಿ ಸಾಲ ಸೌಲಭ್ಯಕ್ಕಾಗಿ ಆಯ್ಕೆಯಾಗಿರುವ ಫಲಾನು ಭವಿಗಳಿಗೆ ನಿಗದಿತ ಕಾಲಮಿತಿಯೊಳಗೆ ಸಾಲ ಮಂಜೂರಾತಿ ಮಾಡಿ ಯೋಜನೆಗಳ ಸದುದ್ದೇಶವನ್ನು ಈಡೇರಿÓ ುವುದು ಈ ಕಾರ್ಯಾಗಾರದ ಉದ್ದೇಶವಾಗಿದೆ. ನಿಗದಿತ ಕಾಲಮಿತಿಯೊಳಗಡೆ ಸಾಲ ಸೌಲಭ್ಯ ಪಾವತಿಸದೇ ಇರುವ ಬ್ಯಾಂಕ್ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದರು.
ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಸಾದ್, ಅಭಿಯಾನ ವ್ಯವಸ್ಥಾಪಕ ವೆಂಕಟಾಚಲಪತಿ, ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಪೌರಾಯುಕ್ತರು/ಮುಖ್ಯಾ ಕಾರಿಗಳು ಹಾಗೂ ಡೇ-ನಲ್ಮ್ ಯೋಜನೆ ಅನುಷ್ಠಾನದ ಅಧಿಕಾರಿ, ಸಿಬ್ಬಂದಿ ಇದ್ದರು.