Advertisement
ಶಿಡ್ಲಘಟ್ಟ ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಗ್ರಾಪಂ ಚುನಾವಣೆಯ ಮತಗಟ್ಟೆಯ ಪಿಆರ್ ಒ-ಎಪಿಆರ್‌ಒಗಳಿಗೆ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಗ್ರಾಪಂಚುನಾವಣೆಯನ್ನುಸುಸೂತ್ರವಾಗಿ ನಡೆಸಲು ಆಯೋಗದಿಂದ ಮಾರ್ಗಸೂಚಿ ಮತ್ತು ಆದೇಶಗಳ ಕೈಪಿಡಿಯನ್ನು ಲೋಪದೋಷವಾಗದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸ ಬೇಕೆಂದು ಸೂಚನೆ ನೀಡಿದರು.
Related Articles
Advertisement
ಗ್ರಾಪಂ ಚುನಾವಣೆಹಿನ್ನೆಲೆಯಲ್ಲಿ ತಹಶೀಲ್ದಾರ್ ಗ್ರೇಡ್-1ಮತ್ತುಗ್ರೇಡ್-2ಅವರನ್ನುವರ್ಗಾವಣೆ ಮಾಡಲಾಗಿದ್ದು, ಚುನಾವಣೆ ಪ್ರಕ್ರಿಯೆ ಮುಗಿದ ಬಳಿಕ ಹಿಂದಿನ ಹುದ್ದೆಗೆ ಹಾಜರಾಗತಕ್ಕದು ಎಂದು ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ರಶ್ಮಿ ಎಂ.ಎಸ್ ಆದೇಶ ಹೊರಡಿಸಿದ್ದಾರೆ.ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ತಹಶೀಲ್ದಾರ್ ಗ್ರೇಡ್-1 ಕೆ.ಅರುಂಧತಿ ಅವರನ್ನು ತುಮಕೂರು ಜಿಲ್ಲಾಧಿಕಾರಿಗಳ ಕಚೇರಿ ತಹಶೀಲ್ದಾರ್ ಗ್ರೇಡ್-1 ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ. ಅವರ ಜಾಗ ದಲ್ಲಿ ತುಮಕೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ತಹಶೀಲ್ದಾರ್ ಗ್ರೇಡ್ -01 ಅನಂತರಾಮು ಜಿ.ಎಸ್ ಅವರನ್ನು ಶಿಡ್ಲಘಟ್ಟ ತಹಶೀಲ್ದಾರ್ ಗ್ರೇಡ್-01 ಆಗಿ ವರ್ಗಾವಣೆ ಮಾಡಲಾಗಿದೆ.
ಚಿಕ್ಕಬಳ್ಳಾಪುರ ತಾಲೂಕಿನ ತಹ ಶೀಲ್ದಾರ್ ಗ್ರೇಡ್-02 ತುಳಸಿ ಜಿ.ವಿ ಅವರನ್ನು ತುಮಕೂರು ತಾಲೂಕು ಕಚೇರಿಯ ತಹಶೀಲ್ದಾರ್ ಗ್ರೇಡ್ 02 ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನಕ್ಕೆ ದಾವಣಗೆರೆ ಜಿಲ್ಲೆಯ ಗ್ರೇಡ್-2 ತಹಶೀಲ್ದಾರ್ ದೇವರಾಜು ಕೆ.ಆರ್. ಅವರನ್ನು ವರ್ಗಾವಣೆ ಮಾಡಲಾಗಿದೆ. ಜಿಲ್ಲೆಯ ಗುಡಿಬಂಡೆ ತಾಲೂಕಿನ ಗ್ರೇಡ್-2 ತಹಶೀಲ್ದಾರ್ ಸಿಬತ್ತುಲ್ಲಾ ಅವರನ್ನು ಮಧುಗರಿ ಉಪವಿಭಾಗಾಧಿಕಾರಿಗಳ ಕಚೇರಿಗೆ ವರ್ಗಾವಣೆ ಮಾಡಲಾಗಿದೆ. ಮಧುಗರಿ ಉಪ ವಿಭಾಗಾಧಿ ಕಾರಿಗಳ ಕಚೇರಿಯ ಗ್ರೇಡ್-2 ತಹಶೀಲ್ದಾರ್ ಡಿ.ಎನ್.ವರದರಾಜು ಗುಡಿಬಂಡೆ ತಾಲೂಕಿನ ತಹಶೀಲ್ದಾರ್ ಆಗಿ ವರ್ಗಾಯಿಸಲಾಗಿದೆ.