Advertisement

ಸಮಾಜದ ಶಾಂತಿಗಾಗಿ ಕಾನೂನಿನ ಅರಿವು ಅಗತ್ಯ

02:17 PM Aug 27, 2022 | Team Udayavani |

ಕೋಲಾರ: ಸಮಾಜದ ಪ್ರತಿಯೊಬ್ಬರಿಗೂ ಕಾನೂನಿನ ಮಹತ್ವ, ಅರಿವು ನೀಡುವಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುವ ಮೂಲಕ ಸಮಾಜದಲ್ಲಿ ಶಾಂತಿ ನೆಲಸಲು ಬದ್ಧತೆಯಿಂದ ಕೆಲಸ ಮಾಡಿ ಎಂದು ಕಾನೂನು ಅರೆಕಾಲಿಕ ಸ್ವಯಂ ಸೇವಕರಿಗೆ ಪೋಕ್ಸೋ ನ್ಯಾಯಾಲಯದ ಜಿಲ್ಲಾ ನ್ಯಾಯಾಧಿಧೀಶ ಬಿ.ಪಿ.ದೇವಮಾನೆ ಸಲಹೆ ನೀಡಿದರು.

Advertisement

ನಗರದ ಬಸವ ಶ್ರೀ ಮಹಾವಿದ್ಯಾಲಯದ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾ ಧಿಕಾರ, ಬಸವಶ್ರೀ ಕಾಲೇಜು ಹಾಗೂ ವಕೀಲರ ಸಂಘಗಳ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಅರೆಕಾಲಿಕ ಸ್ವಯಂ ಸೇವಕರಿಗೆ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಲ್ಲಿ ಕಾನೂನುಗಳ ವಿಷಯಗಳ ಕುರಿತು ಸಮಾಜದಲ್ಲಿ ಅರಿವು ಮೂಡಿಸುವ ಕಾರ್ಯಕ್ಕೆ ಕಾನೂನು ಅರೆಕಾಲಿಕ ಪ್ರತಿನಿಧಿಗಳನ್ನು ಆಯ್ಕೆ ಮಾಡಿದ್ದು, ನಿಮಗೆ ಅಗತ್ಯ ತರಬೇತಿ ನೀಡಲಾಗುತ್ತಿದೆ, ತರಬೇತಿ ಪಡೆದ ನೀವು ಸಮಾಜದಲ್ಲಿ ಕಾನೂನಿನ ಅರಿವು ಮೂಡಿಸುವುದರ ಜತೆಗೆ ಕಾನೂನಿನ ಅರಿವಿಲ್ಲದೇ ಶೋಷಣೆಗೆ ಒಳಗಾದವರ ರಕ್ಷಣೆಗೂ ನೆರವಾಗಬೇಕು ಎಂದು ಕಿವಿಮಾತು ಹೇಳಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ನ್ಯಾಯಾಧೀಶರಾದ ಸುನೀಲ್‌ ಎಸ್‌.ಹೊಸಮನಿ, ಅರೆಕಾಲಿಕ ಸ್ವಯಂ ಸೇವಕರ ಪಾತ್ರ ಹಾಗೂ ಕಾರ್ಯಗಳ ಕುರಿತು ಹಾಗೂ ಕಾನೂನು ಸೇವೆಗಳ ಕಾಯಿದೆ ಕುರಿತು ಅರಿವು ಮೂಡಿಸಿ ಮಾತನಾಡಿ, ಕಾನೂನುಗಳ ಅರಿವು ಸಮಾಜದ ಪ್ರತಿಯೊಬ್ಬರಿಗೂ ಇರಬೇಕು ಎಂಬುದು ಪ್ರಾಧಿಕಾರದ ಉದ್ದೇಶವಾಗಿದೆ ಎಂದರು.

ಕಾನೂನುಗಳ ಕುರಿತು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಅರಿವು ಮೂಡಿಸುವ ಕಾರ್ಯದದಲ್ಲಿ ಪ್ರಾಧಿಕಾರ ಪ್ರಯತ್ನ ನಡೆಸಿದೆ, ಈ ಕಾರ್ಯದಲ್ಲಿ ಸಂಘ ಸಂಸ್ಥೆಗಳು, ವಕೀಲರು, ಕಾನೂನು ವಿದ್ಯಾರ್ಥಿಗಳ ಸಹಕಾರವೂ ಮುಖ್ಯವಾಗಿದೆ ಎಂದು ತಿಳಿಸಿದರು.

ವಕೀಲರ ಸಂಘದ ಅಧ್ಯಕ್ಷ ಜಿ.ಶ್ರೀಧರ್‌ ,ಕಾನೂನು ಸೇವೆಗಳ ಪ್ರಾಧಿಕಾರ ಶೋಷಿತರ, ಮಹಿಳೆಯರು, ಆರ್ಥಿಕವಾಗಿ ಸಬಲರಲ್ಲದ ಜನತೆಗೆ ಕಾನೂನಿನ ಅರಿವು ನೀಡಲು ನಿರಂತರವಾಗಿ ಪ್ರಯತ್ನ ನಡೆಸಿದ್ದು, ಪ್ರಾಧಿಕಾರದ ಪ್ರಯತ್ನಕ್ಕೆ ವಕೀಲರ ಸಂಘ ಸದಾ ಸಹಕಾರ ನೀಡಲಿದೆ ಎಂದು ತಿಳಿಸಿದರು.

Advertisement

ಬಸವಶ್ರೀ ಕಾನೂನು ಕಾಲೇಜಿನ ಪ್ರಾಂಶುಪಾಲ ಡಾ.ಎಂ.ವಿ.ನಾಗರಾಜ್‌ “ಸಂವಿಧಾನದ ಪೀಠಿಕೆ, ಮೂಲಭೂತ ಹಕ್ಕುಗಳು ಹಾಗೂ ಕರ್ತವ್ಯಗಳ ಕುರಿತು ಹಾಗೂ ಹಿರಿಯ ವಕೀಲ ಕೆ.ಆರ್‌.ಧನರಾಜ್‌ ಹಿರಿಯ ನಾಗರೀಕರ ಕಾಯಿದೆ ಹಾಗೂ ಮಕ್ಕಳ ಹಕ್ಕುಗಳ ಕುರಿತು ಉಪನ್ಯಾಸ ನೀಡಿದರು. ಬಾಲ ನ್ಯಾಯ ಮಂಡಳಿ ಸದಸ್ಯರು ಹಾಗೂ ಮಕ್ಕಳ ಕಲ್ಯಾಣ ಸಮಿತಿ ಮಾಜಿ ಅಧ್ಯಕ್ಷ ಜಿ.ವಿನೋದ್‌ ಕುಮಾರ್‌ ಬಾಲ ನ್ಯಾಯ ಕಾಯಿದೆಯ ಕುರಿತು ಮಾಹಿತಿ ನೀಡಿದರು. ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ರಘುಪತಿಗೌಡ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next