Advertisement
ಇದೇ ವೇಳೆ ಇಂಧನ ಇಲಾಖೆಯನ್ನು ಗುರಿಯಾಗಿಸಿಕೊಂಡು ಹರಿಹಾಯ್ದಿರುವ ಕುಮಾರಸ್ವಾಮಿ, ಹಿಂದಿನ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಇಂಧನ ಇಲಾಖೆಯಲ್ಲಿ ನಡೆದ ಅವ್ಯವಹಾರ ಹಾಗೂ ಅಕ್ರಮ ಅದಿರು ಸಾಗಾಣಿಕೆ ಕುರಿತು ಸದನ ಸಮಿತಿಗಳ ವರದಿಯನ್ನು ಪ್ರಸ್ತಾವಿಸಿ “ಕುರಿ ಕಾಯಲು ತೋಳವನ್ನೇ ಬಿಟ್ಟಂತಾಗಿದೆ’ ಎಂದು ಕಾಂಗ್ರೆಸ್ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.
Related Articles
ಗ್ಯಾರಂಟಿಗಳ ಬಗ್ಗೆ ಸ್ವತಃ ಸಚಿವರಿಗೆ ಮಾಹಿತಿ ಇದ್ದಂತೆ ಕಾಣುತ್ತಿಲ್ಲ. ಅವರೆಲ್ಲರೂ ಅರೆಬರೆ ಜ್ಞಾನದಿಂದ ಮಾತನಾಡುತ್ತಿದ್ದಾರೆ. ಅದು ಜನತೆಗೂ ಚೆನ್ನಾಗಿ ಅರ್ಥವಾಗುತ್ತಿದೆ ಎಂದು ಎಚ್.ಡಿ.ಕುಮಾರಸ್ವಾಮಿ ಟೀಕಿಸಿದರು. ಗೃಹ ಲಕ್ಷ್ಮೀ ಯೋಜನೆ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಟಾಳ್ಕರ್ ಅವರ ಹೇಳಿಕೆ ಗೊಂದಲ ಹುಟ್ಟಿಹಾಕಿದೆ. ಅವರೊಬ್ಬರೇ ಅಲ್ಲ, ಬಹುತೇಕ ಎಲ್ಲ ಸಚಿವರಿಗೆ ಗ್ಯಾರಂಟಿಗಳ ಬಗ್ಗೆ ಯಾವ ಮಾಹಿತಿಯೂ ಇಲ್ಲ, ಯಾವ ಗ್ಯಾರಂಟಿಯೂ ಇಲ್ಲ ಎಂದರು. ಗೃಹಜ್ಯೋತಿ ಯೋಜನೆಯ ಬಗ್ಗೆ ಸ್ವತಃ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರಿಗೇ ಅರ್ಥ ಆಗಿಲ್ಲ. ಗೃಹಲಕ್ಷ್ಮಿ, ಗೃಹಜ್ಯೋತಿ ಕಾರ್ಯಕ್ರಮಗಳ ಬಗ್ಗೆ ಜನರಲ್ಲಿ ಕುತೂಹಲ, ನಿರೀಕ್ಷೆ ಹುಟ್ಟು ಹಾಕಲಾಗಿತ್ತು. ಈಗ ಸಚಿವರ ಹೇಳಿಕೆ ಗಮನಿಸಿದರೆ ಅವುಗಳ ಬಗ್ಗೆ ಖಾತರಿಯೂ ಇಲ್ಲ, ಸ್ಪಷ್ಟತೆಯೂ ಇಲ್ಲ ಎಂದು ಗೊತ್ತಾಗುತ್ತದೆ ಎಂದು ಕುಮಾರಸ್ವಾಮಿ ಅವರು ಟೀಕಾಪ್ರಹಾರ ನಡೆಸಿದರು.
Advertisement