ಬೆಂಗಳೂರು: ಬ್ರಹ್ಮಶ್ರೀ ನಾರಾಯಣ ಗುರು ಪಠ್ಯವನ್ನು ಕನ್ನಡದ ಬದಲು ಸಮಾಜ ವಿಜ್ಞಾನ ವಿಷಯಕ್ಕೆ ವರ್ಗಾಯಿಸುವಂತೆ ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನೀಲ್ ಕುಮಾರ್ ಅವರು ಶಿಕ್ಷಣ ಸಚಿವರಿಗೆ ಒತ್ತಾಯಿಸಿದ್ದಾರೆ.
ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಪತ್ರ ಬರೆದಿರುವ ಅವರು ಈ ಮನವಿ ಸಲ್ಲಿಸಿದ್ದಾರೆ.
ಪಠ್ಯ ಪುಸ್ತಕ ಪರಿಷ್ಕರಣೆ ಸಂದರ್ಭದಲ್ಲಿ ನಾರಾಯಣಗುರು ಪಠ್ಯವನ್ನು ಸಮಾಜ ವಿಜ್ಞಾನದಿಂದ ಕನ್ನಡ ವಿಷಯಕ್ಕೆ ವರ್ಗಾಯಿಸಲಾಗಿದೆ. ಇದರಿಂದ ಕನ್ನಡ ಭಾಷೆಯನ್ನು ಐಚ್ಛಿಕವಾಗಿ ತೆಗದುಕೊಳ್ಳದ ವಿದ್ಯಾರ್ಥಿಗಳಿಗೆ ನಾರಾಯಣ ಗುರುಗಳ ಬಗ್ಗೆ ತಿಳಿದು ಕೊಳ್ಳುವುದಕ್ಕೆ ಸಾಧ್ಯವಾಗುವುದಿಲ್ಲ. ಹೀಗಾಗಿ ಈ ಪಠ್ಯವನ್ನು ಕನ್ನಡದಿಂದ ಸಮಾಜ ವಿಜ್ಞಾನಕ್ಕೆ ವರ್ಗಾಯಿಸುವುದು ಸೂಕ್ತ ಎಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿ:ಮೂಲ ಕಾಂಗ್ರೆಸಿಗರಿಗೆ ಸಿದ್ದರಾಮಯ್ಯ ಚಾಕರಿ ಮಾಡುವ ಸುಯೋಗ: ಬಿಜೆಪಿ ಕುಟುಕು