Advertisement

ಜೀರ್ಣೋದ್ಧಾರಕ್ಕೆ ಚೆಕ್‌ ಹಸ್ತಾಂತರ

10:12 AM May 26, 2020 | Suhan S |

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ವಿವಿಧ ದೇವಾಲಯಗಳ ಜೀರ್ಣೋದ್ಧಾರಕ್ಕಾಗಿ ಶಾಸಕಿ ಲಕ್ಷ್ಮೀ ಹೆಬ್ಟಾಳಕರ ತಮ್ಮ ಶಾಸಕರ ನಿಧಿಯಿಂದ ಅನುದಾನದ ಚೆಕ್‌ಗಳನ್ನು ಹಸ್ತಾಂತರಿಸಿದರು.

Advertisement

ಬಿಜಗರಣಿ ಗ್ರಾಮದ ಬಾಹುಕಾಜೀ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಶಾಸಕರ ನಿಧಿಯಿಂದ 5 ಲಕ್ಷ ರೂ. ಮೊತ್ತದ ಚೆಕ್‌ನ್ನು ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಗಳಿಗೆ ನೀಡಿದರು. ಮಾಸ್ತಮರ್ಡಿ ಗ್ರಾಮದ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ 3 ಲಕ್ಷ ರೂ. ಮೊತ್ತದ ಚೆಕ್‌ನ್ನು ದೇವಸ್ಥಾನ ಕಮೀಟಿಯವರಿಗೆ ಹಸ್ತಾಂತರಿಸಿದರು.

ನಂತರ ಮಾತನಾಡಿದ ಶಾಸಕಿ ಹೆಬ್ಟಾಳಕರ, ಜಾತ್ರೆ, ಪುರಾಣ, ಪ್ರವಚನ ಮೂಲಕ ಸಮಾಜಕ್ಕೆ ಉತ್ತಮ ಸಂಸ್ಕಾರವನ್ನು ಕಲಿಸಿ ಕೊಡುವುದರಲ್ಲಿ ದೇವಸ್ಥಾನಗಳು ಪ್ರಮುಖ ಪಾತ್ರ ವಹಿಸುತ್ತಿವೆ. ದೇವಸ್ಥಾನ ಸಂಸ್ಕೃತಿಯ ಪ್ರತೀಕವಾಗಿದ್ದು, ನಮ್ಮ ಸಂಸ್ಕೃತಿ ಹಾಗೂ ಪರಂಪರೆಗಳನ್ನು ಉಳಿಸಿಕೊಂಡು ಹೋಗುವ ದಿಸೆಯಲ್ಲಿ ದೇವಸ್ಥಾನಗಳನ್ನು ಉಳಿಸಿ, ಬೆಳೆಸಬೇಕು ಎಂದು ಹೇಳಿದರು.

ಹಳ್ಳಿಗಳಲ್ಲಿ ಒಗ್ಗಟ್ಟು ಮತ್ತು ಅಭಿವೃದ್ಧಿ ಪರ ಮನೋಭಾವ ಬೆಳೆಯಬೇಕು. ಚುನಾವಣೆ ವೇಳೆ ರಾಜಕೀಯವಿದ್ದರೂ ಅಭಿವೃದ್ಧಿ ವಿಷಯದಲ್ಲಿ ಅದನ್ನು ಮೀರಿ ಸಹಕರಿಸಬೇಕು. ಎಲ್ಲರ ಸಹಕಾರವಿದ್ದಾಗ ಶಾಸಕನಾಗಿ ನನಗೂ ಹೆಚ್ಚು-ಹೆಚ್ಚು ಅಭಿವೃದ್ಧಿ ಕೆಲಸ ತರಲು ಸಾಧ್ಯವಾಗುತ್ತದೆ. ಗ್ರಾಮೀಣ ಕ್ಷೇತ್ರದಲ್ಲಿ ಅಂತಹ ಬದಲಾವಣೆ ಬರುತ್ತಿದ್ದು, ಎಲ್ಲರೂ ಪಕ್ಷ ಭೇದ ಮರೆತು ನನ್ನೊಂದಿಗೆ ಸಹಕರಿಸುತ್ತಿದ್ದಾರೆ. ಇದು ನನಗೆ ಖುಷಿ ತಂದಿದೆ. ಹೀಗಾಗಿಯೇ ಎರಡು ವರ್ಷದಲ್ಲಿ ಕ್ಷೇತ್ರಕ್ಕೆ ಅನೇಕ ಅಭಿವೃದ್ಧಿ ಯೋಜನೆಗಳನ್ನು ತರಲು ಸಾಧ್ಯವಾಗಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next