Advertisement
ಕಳೆದ ಮೂರು ವರ್ಷಗಳಿಂದ ಕುಷ್ಟಗಿ ತಾಲೂಕಿನಲ್ಲಿ ದಕ್ಷ ಹಾಗೂ ಪ್ರಾಮಾಣಿಕ ಸೇವೆಯೊಂದಿಗೆ ರಚನಾತ್ಮಕ ಕಾರ್ಯ ಚಟುವಟಿಕೆಯೊಂದಿಗೆ ಸಾರ್ವಜನಿಕ ಮೆಚ್ಚುಗೆ ಗೆ ಪಾತ್ರರಾಗಿದ್ದ ನಿಂಗಪ್ಪ ರುದ್ರಪ್ಪಗೋಳ ಅವರು ಕಾನೂನು ಚೌಕಟ್ಟಿನಲ್ಲಿ ಕಾರ್ಯನಿರ್ವಹಿಸಿ ಜನಸ್ನೇಹಿ ಅಧಿಕಾರಿ ಆಗಿದ್ದರು.ಕೋವಿಡ್ ಸಂದರ್ಭದಲ್ಲಿ ಅಧಿಕಾರವಹಿಸಿಕೊಂಡಿದ್ದ ಅವರು, ಆಗಿನ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಯಶಸ್ವಿಯಾಗಿ ನಿಭಾಯಿಸಿದ್ದರು. ಸಮಯ ಪ್ರಜ್ಞೆಯೊಂದಿಗೆ ಕಾರ್ಯ ನಿರ್ವಹಿಸಿ ಜನಮಾನಸದಲ್ಲಿ ಉಳಿದಿದ್ದಾರೆ.