Advertisement

ಉಡುಪಿ ಪ್ರಥಮ, ಉ.ಕ. ದ್ವಿತೀಯ, ದ.ಕ. 13ನೇ ಸ್ಥಾನ !

01:30 AM Nov 11, 2021 | Team Udayavani |

ಉಡುಪಿ: ರಾಜ್ಯದ ನಗರ ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ಅತ್ಯಧಿಕ ಇ- ಆಸ್ತಿ ವರ್ಗಾವಣೆ ಮಾಡಿರುವ ರಾಜ್ಯದ ಜಿಲ್ಲಾವಾರು ಪಟ್ಟಿಯಲ್ಲಿ ಉಡುಪಿ ಜಿಲ್ಲೆ ಪ್ರಥಮ, ಉ.ಕ. ಜಿಲ್ಲೆ ದ್ವಿತೀಯ ಹಾಗೂ ದ.ಕ. ಜಿಲ್ಲೆ 13ನೇ ಸ್ಥಾನ ಪಡೆದುಕೊಂಡಿದೆ.

Advertisement

ಉಡುಪಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆ ಗಳಲ್ಲಿ ಅ. 31ರ ವರೆಗೆ ಒಟ್ಟು 12,309 ಅರ್ಜಿ ಗಳು ಸಲ್ಲಿಕೆಯಾಗಿದ್ದು, ಅದರಲ್ಲಿ 11,843 ಅರ್ಜಿ ಗಳನ್ನು ಕಾಲಮಿತಿಗಿಂತ ವೇಗವಾಗಿ ವಿಲೇ ವಾರಿ ಮಾಡಲಾಗಿದೆ. ದ.ಕ. ಜಿಲ್ಲೆಯ ನಗರ ಸ್ಥಳೀಯಾ ಡಳಿತ ಸಂಸ್ಥೆಗಳಲ್ಲಿ ಒಟ್ಟು 13,499 ಅರ್ಜಿಗಳು ಸಲ್ಲಿಕೆಯಾಗಿದ್ದು ಕಾಲಮಿತಿಯೊಳಗೆ 13,301 ಅರ್ಜಿಗಳನ್ನುವಿಲೇವಾರಿ ಮಾಡಲಾಗಿದೆ.

ರಾಜ್ಯಮಟ್ಟದ ಪಟ್ಟಿಯಲ್ಲಿ ಕರಾವಳಿಯ ಎರಡು ಜಿಲ್ಲೆಗಳು ಮೊದಲ ಎರಡು ಆಗ್ರಸ್ಥಾನ ಪಡೆದುಕೊಂಡಿದೆ. ಉಡುಪಿ, ಉತ್ತರ ಕನ್ನಡ, ಕಲಬುರಗಿ, ಕೊಡಗು, ಕೊಪ್ಪಳ, ಕೋಲಾರ, ಗದಗ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ದ.ಕ. ಜಿಲ್ಲೆಯ ನಗರ ಸ್ಥಳೀಯಾಡಳಿತ ಸಂಸ್ಥೆ ಗಳು ಕ್ರಮವಾಗಿ 1ರಿಂದ 13 ಸ್ಥಾನ ಹಂಚಿ ಕೊಂಡಿವೆ. ಕೊನೆಯ ಹತ್ತು ಸ್ಥಾನಗಳನ್ನು ಬೆಂಗಳೂರು, ಬೆಂಗಳೂರು ನಗರ, ಬೆಳಗಾವಿ, ಮಂಡ್ಯ, ಮೈಸೂರು, ಯಾದಗಿರಿ, ರಾಮನಗರ, ರಾಯ ಚೂರು, ಶಿವಮೊಗ್ಗ, ಹಾವೇರಿ ಜಿಲ್ಲೆಯ ನಗರ ಸ್ಥಳೀಯಾಡಳಿತ ಸಂಸ್ಥೆಗಳು ಹಂಚಿಕೊಂಡಿವೆ.

ಇ-ಖಾತೆ ನೋಂದಣಿ:
ಗದಗ, ಉಡುಪಿಗೆ ಸ್ಥಾನ ಆಸ್ತಿ ರಕ್ಷಣೆ ಹಾಗೂ ಪಾರದರ್ಶಕತೆ ಕಾಪಾಡುವ ಉದ್ದೇಶದಿಂದ ನಗರ ಸ್ಥಳೀಯಾಡಳಿತ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆರಂಭವಾದ ಇ- ಆಸ್ತಿ ನೋಂದಣಿ ಪ್ರಕ್ರಿಯೆಯಲ್ಲಿ ಗದಗ 33,418 ಹಾಗೂ ಉಡುಪಿ ಜಿಲ್ಲೆಯ ಒಟ್ಟು 28,394 ಆಸ್ತಿಗಳನ್ನು ಇ- ಆಸ್ತಿಯಾಗಿ ನೋಂದಣಿ ಮಾಡಿದ್ದು ಪ್ರಥಮ, ದ್ವಿತೀಯ ಸ್ಥಾನ ಪಡೆದುಕೊಂಡಿವೆ.

ಇದನ್ನೂ ಓದಿ:ಗ್ರಾಮೀಣ ಪ್ರದೇಶದಲ್ಲಿ 5ಜಿ ಸೌಲಭ್ಯ : ವಿಐ-ನೋಕಿಯಾ ಯಶಸ್ವಿ ಪ್ರಯೋಗ

Advertisement

ಸರ್ವರ್‌ ಸಮಸ್ಯೆ!
ಸಾರ್ವಜನಿಕರು ದಾಖಲೆ ಪೂರೈಕೆ ಮಾಡಿದರೂ ಸರ್ವರ್‌ ಸಮಸ್ಯೆಯಿಂದಾಗಿ ಪರ ದಾಡುತ್ತಿದ್ದಾರೆ. ಇನ್ನೊಂದೆಡೆ ಇ -ಖಾತೆಗೆ ಸಂಬಂಧಿಸಿದಂತೆ ಪ್ರತ್ಯೇಕ ಸಿಬಂದಿ ನೀಡದ ಹಿನ್ನೆಲೆಯಲ್ಲಿ ಕೆಲಸಗಳು ಆಮೆ ನಡಿಗೆಯಂತಾಗಿವೆ. ಉಡುಪಿ ನಗರಸಭೆಯ ಕಂದಾಯ ವಿಭಾಗದಲ್ಲಿ ಕೆಲಸ ನಿರ್ವಹಿಸಲು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಂಡು, ಅರ್ಜಿಗಳನ್ನು ವಿಲೇವಾರಿ ಮಾಡಲಾಗುತ್ತಿದೆ. ನಿತ್ಯ ಸುಮಾರು 60ಕ್ಕೂ ಅಧಿಕ ಅರ್ಜಿಗಳು ಸಲ್ಲಿಕೆಯಾಗುತ್ತಿವೆ.

ಇ- ಆಸ್ತಿ ವರ್ಗಾವಣೆಯಲ್ಲಿ ಉಡುಪಿ ಜಿಲ್ಲೆಯ ನಗರ ಸ್ಥಳೀಯಾಡಳಿತ ಸಂಸ್ಥೆಗಳು ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿವೆ. ನಗರಸಭೆಗೆ ಬಂದಿರುವ ಅರ್ಜಿಗಳನ್ನು ಶೀಘ್ರದಲ್ಲಿ ವಿಲೇವಾರಿ ಮಾಡಲಾಗುತ್ತಿದೆ. ಕೆಲವೊಮ್ಮ ತಾಂತ್ರಿಕ ಸಮಸ್ಯೆಯಿಂದ ತಡವಾಗುತ್ತಿದೆ.
– ಧನಂಜಯ, ಉಡುಪಿ ನಗರಸಭೆ

Advertisement

Udayavani is now on Telegram. Click here to join our channel and stay updated with the latest news.

Next