Advertisement

IAS ಅಧಿಕಾರಿಗಳ ವರ್ಗಾವಣೆ: ಸರಕಾರ ಆದೇಶ

11:24 PM Feb 27, 2024 | Team Udayavani |

ಬೆಂಗಳೂರು: ವಿವಿಧ ಇಲಾಖೆಗಳಲ್ಲಿನ ಐಎಎಸ್‌ ಅಧಿಕಾರಿಗಳ ವರ್ಗಾವಣೆ ಮಾಡಿ ಸರಕಾರ ಮಂಗಳವಾರ ಆದೇಶ ಹೊರಡಿಸಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿಯಾಗಿದ್ದ ಎನ್‌. ಮಂಜುಳಾ ಅವರನ್ನು ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಲಾಗಿದೆ. ಇದರಿಂದ ತೆರವಾದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಹುದ್ದೆಗೆ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಯಾಗಿದ್ದ ಡಾ| ಎಂ.ಎನ್‌. ಅಜಯ್‌ ನಾಗಭೂಷಣ್‌ ಅವರನ್ನು ವರ್ಗಾಯಿಸಲಾಗಿದೆ.

Advertisement

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರಾಗಿದ್ದ ಡಿ. ರಂದೀಪ್‌ ಅವರನ್ನು ಸಿಬಂದಿ ಮತ್ತು ಆಡಳಿತ ಸುಧಾರಣೆಗಳ ಇಲಾಖೆ ಕಾರ್ಯದರ್ಶಿಯಾಗಿ ನೇಮಿಸಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಭಾರ ಕಾರ್ಯದರ್ಶಿಯಾಗಿ ಡಾ| ಎಂ.ಎನ್‌.ಅಜಯ್‌ ನಾಗಭೂಷಣ್‌ ಅವರನ್ನು ನೇಮಿಸಲಾಗಿದೆ. ಕರ್ನಾಟಕ ನಗರ ಮೂಲಸೌಕರ್ಯಗಳ ಅಭಿವೃದ್ಧಿ ಮತ್ತು ಹಣಕಾಸು ನಿಗಮ (ಕೆಯುಐಡಿಎಫ್ಸಿ) ವ್ಯವಸ್ಥಾಪಕ ನಿರ್ದೇಶಕ
ರಾಗಿದ್ದ ಎಂ. ದೀಪಾ ಅವರನ್ನು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಿ ತತ್‌ಕ್ಷಣದಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next