ಬೆಂಗಳೂರು: ರಾಜ್ಯ ಸರಕಾರ ಸುಮಾರು 15ಕ್ಕೂ ಅಧಿಕ ಐಎಎಸ್ ಅಧಿಕಾರಿಗಳನ್ನು ಸೋಮವಾರ ವರ್ಗಾಯಿಸಿ ಆದೇಶ ಹೊರಡಿಸಿದೆ.
ಮನೀಷ್ ಮೌದ್ಗಿಲ್- ಭೂ ವ್ಯಾಜ್ಯ ಮತ್ತು ಭೂ ದಾಖಲೆಗಳ ಆಯುಕ್ತ, ಶಿವಯೋಗಿ ಕಳಸದ- ಕೃಷಿ ಇಲಾಖೆ ಕಾರ್ಯದರ್ಶಿ, ವಿ. ಅನುºಕುಮಾರ್- ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ, ಡಾ| ಎನ್.ವಿ. ಪ್ರಸಾದ್- ಸಾರಿಗೆ ಇಲಾಖೆ ಕಾರ್ಯದರ್ಶಿ, ಜಿ. ಸತ್ಯವತಿ- ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಹಾಗೂ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ)ದ ಕಾರ್ಯದರ್ಶಿ, ಡಾ| ಜಿ. ಕಲ್ಪನಾ- ಕಾರ್ಮಿಕ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಡಾ| ಶ್ರೀವತ್ಸ ಕೃಷ್ಣ- ಸಿಬಂದಿ ಮತ್ತು ಆಡಳಿತ ಸುಧಾರಣ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಆಗಿದ್ದಾರೆ.
ಡಾ| ಎಂ.ಟಿ. ರೇಜು- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಾರ್ಯದರ್ಶಿ, ಎಂ. ದೀಪಾ- ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ (ಕೆಯುಐಡಿಎಫ್ಸಿ) ವ್ಯವಸ್ಥಾಪಕ ನಿರ್ದೇಶಕಿ, ಪಲ್ಲವಿ ಅಕುರತಿ- ಸರ್ವ ಶಿಕ್ಷಣ ಅಭಿಯಾನ ಯೋಜನಾ ನಿರ್ದೇಶಕಿ, ಆರ್. ವೆಂಕಟೇಶ ಕುಮಾರ್- ಸಾಂಖ್ಯಿಕ ಇಲಾಖೆಯ ಜಂಟಿ ಕಾರ್ಯದರ್ಶಿ ಹಾಗೂ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ, ಕೆ. ರಾಕೇಶ್ ಕುಮಾರ್- ಸಮಾಜ ಕಲ್ಯಾಣ ಇಲಾಖೆ ಆಯುಕ್ತ, ಪಿ.ಎನ್. ರವೀಂದ್ರ- ಬಿಬಿಎಂಪಿ ವಿಶೇಷ ಆಯುಕ್ತ (ಯೋಜನೆ), ಡಾ| ಅವಿನಾಶ್ ಮೆನನ್ ರಾಜೇಂದ್ರನ್- ರಾಮನಗರ ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ.
ಎಲ್. ಚಂದ್ರಶೇಖರ್ ನಾಯಕ- ರಾಯಚೂರು ಜಿಲ್ಲಾಧಿಕಾರಿ, ವಿಜಯ ಮಹಾಂತೇಶ್ ಬಿ. ದಾನಮ್ಮನವರ- ವಿಜಯಪುರ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಆಗಿದ್ದಾರೆ.
ಆದಿತ್ಯ ಬಿಸ್ವಾಸ್ ಬೆಳಗಾವಿ ವಿಭಾಗದ ಆಯುಕ್ತಬಹುಕೋಟಿ ವಂಚನೆಯ ಐಎಂಎ ಪ್ರಕರಣದ ವಿಶೇಷ ತನಿಖಾಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರದ ಮುಖ್ಯಸ್ಥ ಹುದ್ದೆಗೆ ಆಲ್ಮನ್ ಆದಿತ್ಯ ಬಿಸ್ವಾಸ್ ಅವರನ್ನು ನಿಯೋಜಿಸಲಾಗಿದೆ.
ಈ ಮೊದಲು ಹರ್ಷ ಗುಪ್ತ ಅವರು ಪ್ರಕರಣದ ಸಕ್ಷಮ ಪ್ರಾಧಿಕಾರದ ಮುಖ್ಯಸ್ಥರಾಗಿದ್ದರು. ಆಲ್ಮನ್ ಆದಿತ್ಯ ಬಿಸ್ವಾಸ್ ಬೆಳಗಾವಿ ವಿಭಾಗದ ಆಯುಕ್ತರಾಗಿಯೂ ಮುಂದುವರಿಯಲಿದ್ದಾರೆ.