Advertisement

ಮಾಹಿತಿ ಸುಪ್ರೀಂ ಸಿಜೆಗೆ ರವಾನೆ: ಎಚ್‌ಕೆಪಿ

03:31 AM Apr 14, 2019 | Lakshmi GovindaRaju |

ಬೆಂಗಳೂರು: ನೋಟು ಅಮಾನ್ಯಿಕರಣದ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಕೇಂದ್ರ ಸರ್ಕಾರದ ಅಧಿಕಾರಿಗಳನ್ನು ಬಳಸಿಕೊಂಡು 3 ಲಕ್ಷ ಕೋಟಿ ರೂ. ಮೊತ್ತದ ನೋಟುಗಳನ್ನು ವಿದೇಶದಲ್ಲಿ ಮುದ್ರಣ ಮಾಡಿ ಸಾಗಾಣಿಕೆ ಮತ್ತು ವಿನಿಯಮ ಮಾಡಿದ್ದಾರೆ ಎಂಬ ಕುಟುಕು ಕಾರ್ಯಾಚರಣೆಯ ವಿಡಿಯೋ ತುಣುಕುಗಳು ಹಾಗೂ ಇತರ ಮಾಹಿತಿಗಳನ್ನು ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾ.ಯವರಿಗೆ ರವಾನಿಸಲಾಗಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಚ್‌.ಕೆ. ಪಾಟೀಲ್‌ ಹೇಳಿದ್ದಾರೆ.

Advertisement

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸ್ವತಂತ್ರ ಭಾರತದ ಇತಿಹಾಸದಲ್ಲೇ ಇದು ಅತ್ಯಂತ ದೊಡ್ಡ ಹಗರಣವೆಂದು ಕರೆಯಬೇಕಾಗುತ್ತದೆ. ಆಡಳಿತ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಕೃಪಾಶೀರ್ವಾದದಿಂದಲೇ ಈ ಅವ್ಯವಹಾರ ನಡೆದಿರುವುದು ಕುಟುಕು ಕಾರ್ಯಾಚರಣೆ ವಿಡಿಯೋದಲ್ಲಿ ಸ್ಪಷ್ಟವಾಗಿದೆ. ಇಂತಹ ದುಷ್ಕೃತ್ಯದಮೂಲಕ ದೇಶದ ಆರ್ಥವ್ಯವಸ್ಥೆಯ ಮೇಲೆ ಗದಾಪ್ರಹಾರ ಮಾಡಲಾಗಿದೆ ಎಂದು ಆರೋಪಿಸಿದರು.

ಆದ್ದರಿಂದ, ಕುಟುಕು ಕಾರ್ಯಾಚರಣೆಯ ದೃಶ್ಯಗಳು, ಹಣಕಾಸಿನ ವ್ಯವಹಾರದ ವಿವರಗಳನ್ನು ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿಗಳ ಗಮನಕ್ಕಾಗಿ ಕಳಿಸಲಾಗಿದೆ. ಜೊತೆಗೆ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿಗಳ ಸಹೋದ್ಯೋಗಿ ನ್ಯಾಯಮೂರ್ತಿಗಳಿಗೂ ಕಳುಹಿಸಿದ್ದೇವೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಪೂರ್ಣ ಪ್ರಮಾಣದ, ಅತ್ಯಂತ ಉನ್ನತಮಟ್ಟದ ತನಿಖೆ ನಡೆಸಿ, ಸತ್ಯವನ್ನು ಕಂಡುಹಿಡಿದು, ಸೂಕ್ತ ಕ್ರಮ ಜರುಗಿಸಬೇಕೆಂದು ಕೋರಿದ್ದೇವೆ.

ಸುಪ್ರೀಂ ಕೋರ್ಟಿನ ಮುಖ್ಯನ್ಯಾಯಮೂರ್ತಿಗಳು ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಸೂಕ್ತವೆನಿಸುವ ಕ್ರಮಕ್ಕೆ ಆದೇಶಿಸಬೇಕು. ಈ ಹಗರಣವನ್ನು ರಾಷ್ಟ್ರದ ಹಿತಾಸಕ್ತಿಯ ವಿಶೇಷ ಪ್ರಕರಣವೆಂದು ಪರಿಗಣಿಸಿ ಅಗತ್ಯವೆನ್ನಿಸುವ ಕ್ರಮಕೈಗೊಳ್ಳಬೇಕೆಂದು ಮನವಿ ಮಾಡಿದ್ದೇವೆ ಎಂದು ಎಚ್‌.ಕೆ ಪಾಟೀಲ್ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next