Advertisement

ಹನ್ನೊಂದು ಐಎಎಸ್‌ ಅಧಿಕಾರಿಗಳ ವರ್ಗಾವಣೆ

11:29 PM Sep 06, 2019 | Lakshmi GovindaRaju |

ಬೆಂಗಳೂರು: ರಾಜ್ಯ ಸರ್ಕಾರ 11 ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಶುಕ್ರವಾರ ಸಂಜೆ ಆದೇಶ ಹೊರಡಿಸಿದೆ. ಡಾ.ರಾಜ್‌ಕುಮಾರ್‌ ಕತ್ರಿ-ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಅಮ್ಲಾನ್‌ ಆದಿತ್ಯ ಬಿಸ್ವಾಸ್‌-ಬೆಳಗಾವಿ ಪ್ರಾದೇಶಿಕ ಆಯುಕ್ತರು ಹಾಗೂ ಕೃಷ್ಣಾ ಮೇಲ್ದಂಡೆ ಯೋಜನೆಯ ಭೂಸ್ವಾಧೀನ ಮತ್ತು ಪುನರ್ವಸತಿ ಆಯುಕ್ತರು, ಎ.ಬಿ.ಇಬ್ರಾಹಿಂ-ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆ ಕಾರ್ಯದರ್ಶಿ ಹಾಗೂ ಆಹಾರ ಮತ್ತು ನಾಗರೀಕ ಸೇವೆ ಇಲಾಖೆ ಕಾರ್ಯದರ್ಶಿ, ಸಿ.ಶಿಖಾ-ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಕರ್ನಾಟಕ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ನಿಗಮದ ವ್ಯವಸ್ಥಾಪಕ ನಿರ್ದೇಶಕರು, ಸಲ್ಮಾ ಫಾಹಿಮ್‌-ಹಟ್ಟಿ ಚಿನ್ನದ ಗಣಿ ವ್ಯವಸ್ಥಾಪಕ ನಿರ್ದೇಶಕರು.

Advertisement

ಕೆ.ಜಿ. ಶಾಂತಾರಾಮ್‌-ಆಯುಕ್ತರು, ಕಾರ್ಮಿಕ ಇಲಾಖೆ, ಅನಿರುದ್ಧ್ ಶ್ರವಣ್‌-ಆಯುಕ್ತರು, ಕಾಲೇಜು ಶಿಕ್ಷಣ ಇಲಾಖೆ, ಹೆಬ್ಸಿಬಾರಾಣಿ ಕೊರ್ಲಪಟ್ಟಿ-ವ್ಯವಸ್ಥಾಪಕ ನಿರ್ದೇಶಕರು, ಬೆಂಗಳೂರು ಸ್ಮಾರ್ಟ್‌ ಸಿಟಿ ನಿಗಮ, ಕೆ.ಶ್ರೀನಿವಾಸ್‌- ಆಯುಕ್ತರು, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಎಂ.ಆರ್‌.ರವಿಕುಮಾರ್‌- ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರೇಷ್ಮೆ ಮಾರುಕಟ್ಟೆ ಮಂಡಳಿ, ಡಿ.ಎಸ್‌.ರಮೇಶ್‌- ಆಯುಕ್ತರು, ಕರ್ನಾಟಕ ಗೃಹ ಮಂಡಳಿ.

Advertisement

Udayavani is now on Telegram. Click here to join our channel and stay updated with the latest news.

Next