Advertisement
ಕಳೆದ ಎರಡ್ಮೂರು ತಿಂಗಳಿನಿಂದ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಗಣನೀಯವಾಗಿ ಇಳಿಕೆಯಾಗಿದ್ದರಿಂದ ಜನರು ಮಾಸ್ಕ್ ಹಾಗೂ ಸಾಮಾಜಿಕ ಅಂತರ ಪಾಲಿಸುವುದನ್ನು ಮರೆತಿದ್ದಾರೆ. ಅಲ್ಲದೇ ನವೆಂಬರ್ ತಿಂಗಳ ಆರಂಭದಿಂದಲೇ ಒಂದೇ ಒಂದು ಪ್ರಕರಣವಿಲ್ಲದೇ ಜಿಲ್ಲೆಯಲ್ಲಿ ಕೋವಿಡ್ ಶೂನ್ಯಕ್ಕಿಳಿದು ಜಿಲ್ಲೆಯ ಸಾರ್ವಜನಿಕರು ಹಾಗೂ ಜಿಲ್ಲಾಡಳಿತ ನಿಟ್ಟುಸಿರು ಬಿಡುವಂತಾಗಿತ್ತು. ಆದರೆ ನೆರೆಯ ಧಾರವಾಡ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಕೋವಿಡ್ ಸೋಂಕು ಸ್ಫೋಟಗೊಂಡಿರುವುದು ಜಿಲ್ಲೆಯ ಜನರಲ್ಲಿ ಮತ್ತೆ ಕೊರೊನಾ ಭೀತಿ ಹೆಚ್ಚುವಂತೆ ಮಾಡಿದೆ.
Related Articles
Advertisement
35.84 ಲಕ್ಷ ದಂಡ ವಸೂಲಿಜಿಲ್ಲೆಯಲ್ಲಿ ಕೋವಿಡ್ ನಿಮಯ ಪಾಲಿಸುವಂತೆ ಸಾಕಷ್ಟು ಬಾರಿ ಜಾಗೃತಿ ಮೂಡಿದರೂ ಅದನ್ನು ಪಾಲಿಸದೇ ನಿರ್ಲಕ್ಷ್ಯ ತೋರಿದ ಜನರಿಂದ ಪೊಲೀಸ್ ಇಲಾಖೆ ದಂಡವನ್ನು ವಸೂಲಿ ಮಾಡಿ ಮಾಸ್ಕ್ ಹಾಕಿಕೊಳ್ಳುವಂತೆ ಜಾಗೃತಿ ಮೂಡಿಸಲಾಗುತ್ತಿದೆ. ಜಿಲ್ಲೆಯಲ್ಲಿ ಇದುವರೆಗೆ ಮಾಸ್ಕ್ ಹಾಕದೇ ನಿರ್ಲಕ್ಷ್ಯ ತೋರಿದ ಕುರಿತು 35,849 ಕೇಸ್‌ಗಳು ದಾಖಲಾಗಿವೆ. ಸುಮಾರು 35,84,900 ರೂ., ದಂಡ ವಸೂಲಿ ಮಾಡಲಾಗಿದೆ. ಕೊರೊನಾ ಲೆಕ್ಕಾಚಾರ
ಜಿಲ್ಲೆಯಲ್ಲಿ ಸದ್ಯ ಕೇವಲ ಒಂದು ಕೋವಿಡ್ ಸಕ್ರಿಯ ಪ್ರಕರಣವಿದೆ. ಜಿಲ್ಲೆಯಲ್ಲಿ ಇದುವರೆಗೆ 22,203 ಜನರಿಗೆ ಸೋಂಕು ತಗುಲಿದ್ದು, 21,552 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಚಿಕಿತ್ಸೆ ಫಲಿಸದೇ 650 ಜನರು ಮೃತಪಟ್ಟಿದ್ದಾರೆ. ಪಕ್ಕದ ಧಾರವಾಡ ಜಿಲ್ಲೆಯಲ್ಲಿ ಸೋಂಕಿನ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದ್ದು, ಮುಂಬರುವ ದಿನಗಳಲ್ಲಿ ಜಿಲ್ಲೆಯಲ್ಲಿ ಕೋವಿಡ್ ಸೋಂಕು ಹರಡುವ ಸಾಧ್ಯತೆ ಅಲ್ಲಗಳೆಯುವಂತಿಲ್ಲ. ಜಿಲ್ಲೆಯಲ್ಲಿ ಶೇ.86.11 ಜನರಿಗೆ ಮೊದಲ ಡೋಸ್ ಹಾಗೂ ಶೇ.46.73 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ವಾರಕ್ಕೆ ಮೂರು ಬಾರಿ ಕೋವಿಡ್ ಲಸಿಕಾ ಮೆಗಾ ಮೇಳ ಹಮ್ಮಿಕೊಂಡು ನಿಗದಿತ ಗುರಿ ಸಾಧಿಸಲಾತ್ತಿದೆ. ಕೋವಿಡ್ ರೂಪಾಂತರ ತಳಿ ಒಮಿಕ್ರಾನ್ ಕುರಿತು ಜಿಲ್ಲೆಯಾದ್ಯಂತ ಕಟ್ಟೆಚ್ಚರ ವಹಿಸಲಾಗುತ್ತಿದೆ. ಸಾರ್ವಜನಿಕರು ಮೈಮರೆಯದೇ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು.
ಸಂಜಯ ಶೆಟ್ಟೆಣ್ಣವರ, ಜಿಲ್ಲಾಧಿಕಾರಿ ಜಿಲ್ಲೆಯ ಜನರು ಕೋವಿಡ್ ತಡೆಗಟ್ಟಲು ಸರ್ಕಾರ ಸೂಚಿಸಿರುವ ಮುನ್ನೆಚ್ಚರಿಕೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಪ್ರತಿಯೊಬ್ಬರು ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆದುಕೊಳ್ಳಬೇಕು. ಅಲ್ಲದೇ ಮಾಸ್ಕ್, ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಮೂಲಕ ಮುಂಜಾಗ್ರತೆ ವಹಿಸಬೇಕು.
ಡಾ| ಎಚ್.ಎಸ್. ರಾಘವೇಂದ್ರಸ್ವಾಮಿ,
ಡಿಎಚ್‌ಒ ವೀರೇಶ ಮಡ್ಲೂರ