ಬೆಂಗಳೂರು: ಮಂಗಳವಾರದ ದೇಶಾದ್ಯಂತ ಸಾರಿಗೆ ನೌಕರರ ಮುಷ್ಕರಕ್ಕೆ ಬಹುತೇಕ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿಲ್ಲ. ಬೆಂಗಳೂರಿನಲ್ಲಿ ಬಿಎಂಟಿಸಿ, ಕೆಎಸ್ ಆರ್ ಟಿಸಿ ಎಂದಿನಂತೆ ಸಂಚರಿಸಲಿದೆ. ಮುಷ್ಕರದಲ್ಲಿ ಭಾಗಿಯಾದರೆ ಶಿಸ್ತುಕ್ರಮ ಕೈಗೊಳ್ಳುವುದಾಗಿ ಬಿಎಂಟಿಸಿ, ಕೆಎಸ್ ಆರ್ ಟಿಸಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ನಾಳೆ ಎಂದಿನಂತೆ ಸಾರಿಗೆ ಬಸ್ ಗಳು ಸಂಚರಿಸಲಿವೆ. ಮೆಟ್ರೋ, ಟೂರಿಸ್ಟ್ ಟ್ಯಾಕ್ಸಿಗಳಿಂದಲೂ ಬಂದ್ ಗೆ ಬೆಂಬಲ ಇಲ್ಲ ಎಂದು ಹೇಳಿವೆ. ಅದೇ ರೀತಿ ಆಟೋ ಸಂಚಾರದ ಬಗ್ಗೆ ನಿಖರವಾಗಿ ತಿಳಿದು ಬಂದಿಲ್ಲ.
ಸಿಐಟಿಯು, ಎಐಸಿಟಿಯು ಸೇರಿದಂತೆ ಕಾರ್ಮಿಕ ಸಂಘಟನೆಗಳು ಕೇಂದ್ರದ ಮೋಟಾರು ವಾಹನ ಕಾಯ್ದೆ ವಿರೋಧಿಸಿ ದೇಶಾದ್ಯಂತ ಮಂಗಳವಾರ ಮುಷ್ಕರಕ್ಕೆ ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ಕೆಲವು ಸಂಘಟನೆಗಳು ಬಂದ್ ಗೆ ಬೆಂಬಲ ವ್ಯಕ್ತಪಡಿಸಿದ್ದರೆ, ಇನ್ನು ಹಲವು ಸಂಘಟನೆಗಳು ಬಂದ್ ಗೆ ಬೆಂಬಲ ಸೂಚಿಸಿಲ್ಲ.