Advertisement
ದೆಹಲಿಯಲ್ಲಿ ಗುರುವಾರ ಕಾಂಗ್ರೆಸ್ ನಾಯಕರೊಂದಿಗೆ ಸಮಾಲೋಚನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾರ್ಕೊಪೋಲೊ ಬಸ್ ಖರೀದಿ ಹಗರಣದ ತನಿಖೆ ನಡೆದಿದ್ದು, ಇದರಲ್ಲಿ ಬಿಜೆಪಿ ಆಡಳಿತದಲ್ಲಿ ಸಾರಿಗೆ ಸಚಿವರೂ ಆಗಿದ್ದ ಆರ್. ಅಶೋಕ ಅವರ ಪಾತ್ರ ಇರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಆದರೆ, ಈ ಕುರಿತು ಇನ್ನೂ ಪರಿಶೀಲನೆ ನಡೆದಿದೆ ಎಂದು ಹೇಳಿದರು.
ಮಾರ್ಕೊಪೋಲೊ ಬಸ್‌ಗಳ ಖರೀದಿ ಅವ್ಯವಹಾರದ ಬಗ್ಗೆ ಸದನ ಸಮಿತಿ ಕೂಡ ಈಗಾಗಲೇ ವರದಿ ಸಲ್ಲಿಸಿದೆ. ದೂಳು ತಿನ್ನುತ್ತಿರುವ ಈ ಕಡತದ ಪರಿಶೀಲನೆ ಈಗ ಕೈಗೆತ್ತಿಕೊಳ್ಳಲಾಗಿದೆ. ಮುಂದಿನ 8-10 ದಿನಗಳಲ್ಲಿ ಸ್ಪಷ್ಟ ಚಿತ್ರಣ ಸಿಗಲಿದೆ ಎಂದೂ ಅವರು ಹೇಳಿದರು. ಇದಕ್ಕೂ ಮುನ್ನ ಮೋಟಾರು ವಾಹನ ಕಾಯ್ದೆ (ತಿದ್ದುಪಡಿ)ಯಲ್ಲಿನ ಲೋಪದೋಷಗಳ ಕುರಿತು ರಾಜ್ಯಸಭೆ ಸದಸ್ಯ ಗುಲಾಂ ನಬಿ ಆಜಾದ್ ಸೇರಿದಂತೆ ರಾಜ್ಯಸಭೆ ಪ್ರತಿಪಕ್ಷದ ನಾಯಕರ ಜತೆ ಚರ್ಚೆ ನಡೆಸಿದರು.