Advertisement

ನಾಳೆಯೂ ಮುಂದುವರೆಯಲಿದೆ ಸಾರಿಗೆ ನೌಕರರ ಮುಷ್ಕರ : ಕೋಡಿಹಳ್ಳಿ

05:27 PM Apr 07, 2021 | Team Udayavani |

ಬೆಂಗಳೂರು : ನಾಳೆಯೂ ಸಾರಿಗೆ ನೌಕರರ ಮುಷ್ಕರ ಮುಂದುವರೆಯುತ್ತದೆ. ನಾಳೆ ಕೂಡ ಬಸ್ ಗಳು ರಸ್ತೆಗೆ ಇಳಿಯುವುದಿಲ್ಲ ಎಂದು ಬುಧವಾರ ರಾಜ್ಯ ರಸ್ತೆ ಸಾರಿಗೆ ನೌಕರರ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.

Advertisement

ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಅನಿರ್ದಿಷ್ಟಾವಧಿ ಮುಷ್ಕರ ಮಾಡಲು ನಾವು ಸಿದ್ಧರಿದ್ದೇವೆ. ಸರ್ಕಾರವು ಕೋವಿಡ್ ನೆಪ ಹೇಳಿ ಸಂಬಳ ಕಡಿಮೆ ನೀಡುತ್ತಿದೆ. ಮಠ, ಮಂದಿರಗಳಿಗೆ ಹಣ ನೀಡಲು ಎಲ್ಲಿಂದ ಬರುತ್ತದೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಸರ್ಕಾರಕ್ಕೆ ಪ್ರಶ್ನೆ ಮಾಡಿದ್ದಾರೆ.

ರಾಜ್ಯ ಸರ್ಕಾರ ಈ ತಾರತಮ್ಯ ನೀತಿಯನ್ನು ಬಿಡಬೇಕು. ಆರನೇ ವೇತನ ಆಯೋಗದಂತೆ ವೇತನ ನೀಡಬೇಕು. ಇದು ನಮ್ಮ ಮುಖ್ಯ ಬೇಡಿಕೆ. ಎಸ್ಮಾ ಜಾರಿ ಮಾಡುವ ಅನಿವಾರ್ಯತೆ ಸೃಷ್ಟಿಯಾಗಿಲ್ಲ ಎಂದು ಹೇಳಿದ್ದಾರೆ.

ಇನ್ನು ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು ಎಂದು ಸಾರಿಗೆ ನೌಕರರ ಪರ ಹೋರಾಟಗಾಗರು ಸರ್ಕಾರಕ್ಕೆ ಬೇಡಿಕೆ ಇಟ್ಟಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next