Advertisement

ತಿಪ್ಪೇನಹಳ್ಳಿ ಗ್ರಾಮದಲ್ಲಿ ನ್ಯಾಯಾಧೀಶರಿಂದ ಸಾರಿಗೆ ಬಸ್ ನಿಲುಗಡೆ ಫಲಕ ಅನಾವರಣ

07:17 PM Feb 23, 2022 | Team Udayavani |

ಚಿಕ್ಕಬಳ್ಳಾಪುರ: ತಾಲೂಕಿನ ತಿಪ್ಪೇನಹಳ್ಳಿ ಹಾಗೂ ಸುತ್ತಮುತ್ತ ಗ್ರಾಮಗಳಿಂದ ಬರುವ ವಿದ್ಯಾರ್ಥಿಗಳಿಗೆ ಶಾಲಾ-ಕಾಲೇಜಿನ ಸಮಯಕ್ಕೆ ಅನುಗುಣವಾಗಿ ಸಾರಿಗೆ ಬಸ್ ನಿಲುಗಡೆ ಸೌಲಭ್ಯವಿಲ್ಲದೆ ಪರದಾಡುವಂತಾಗಿದೆಯೆಂದು ವಿದ್ಯಾರ್ಥಿಗಳು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ದೂರು ಸಲ್ಲಿಸಿದ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಸಾರಿಗೆ ಸಂಸ್ಥೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲು ಸಾರಿಗೆ ಬಸ್ ಕೋರಿಕೆ ನಿಲುಗಡೆ ಫಲಕವನ್ನು ಅನಾವರಣಗೊಳಿಸಿದ್ದಾರೆ.

Advertisement

ತಿಪ್ಪೇನಹಳ್ಳಿ ಗ್ರಾಮದಿಂದ ಚಿಕ್ಕಬಳ್ಳಾಪುರ ನಗರಕ್ಕೆ ತೆರಳಲು ಸಾರಿಗೆ ಬಸ್‍ಗಳು ನಿಲುಗಡೆ ಮಾಡದೆ ಹೊರಟು ಹೋಗುತ್ತಿರುವುದರಿಂದ ವಿದ್ಯಾರ್ಥಿಗಳು ಸಕಾಲಕ್ಕೆ ಶಾಲಾ ಕಾಲೇಜುಗಳಿಗೆ ತೆರಳಲು ಕಷ್ಟವನ್ನು ಅನುಭವಿಸುವಂತಾಗಿದೆ ಜೊತೆಗೆ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಕುಂಠಿತವಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿ ವಿದ್ಯಾರ್ಥಿಗಳು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿದರು.

ವಿದ್ಯಾರ್ಥಿಗಳ ಮನವಿಗೆ ತಕ್ಷಣ ಸ್ಪಂದಿಸಿದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಲಕ್ಷ್ಮೀಕಾಂತ್ ಜೆ. ಮಿಸ್ಕಿನ್ ಅವರು ಸಾರಿಗೆ ಸಂಸ್ಥೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರ ಸಮ್ಮುಖದಲ್ಲಿ ಕೋರಿಕೆ ನಿಲುಗಡೆ ಫಲಕವನ್ನು ಅನಾವರಣಗೊಳಿಸಿ ಇನ್ನುಮುಂದೆ ಕಡ್ಡಾಯವಾಗಿ ಎಲ್ಲಾ ಸಾರಿಗೆ ಬಸ್‍ಗಳು ನಿಲುಗಡೆ ನೀಡುವಂತೆ ಆದೇಶಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next