Advertisement

Trasi: ಸಾಂಪ್ರದಾಯಿಕ ‌ಮೀನುಗಾರರಿಂದ ಬೃಹತ್ ಪ್ರತಿಭಟನೆ; ಗಂಟಿಹೊಳೆ,‌ ಗೋಪಾಲ ಪೂಜಾರಿ ಭಾಗಿ

03:00 PM Jan 10, 2025 | Team Udayavani |

ಕುಂದಾಪುರ: ಸಾಂಪ್ರದಾಯಿಕ ‌ಮೀನುಗಾರರಿಂದ ತ್ರಾಸಿಯಲ್ಲಿ ಜ.10ರ ಶುಕ್ರವಾರ ಬೃಹತ್ ಪ್ರತಿಭಟನೆ ನಡೆದಿದೆ.

Advertisement

ಲೈಟ್ ಫಿಶಿಂಗ್ ಮೀನುಗಾರಿಕೆ, ಅವೈಜ್ಞಾನಿಕ ಮೀನುಗಾರಿಕೆ ನಿಷೇಧಕ್ಕೆ ಆಗ್ರಹಿಸಿ ಬೈಂದೂರು ವಲಯ, ಗಂಗೊಳ್ಳಿ ವಲಯದ‌ ನೇತೃತ್ವದಲ್ಲಿ ತ್ರಾಸಿಯ ಕಡಲ ತೀರದಲ್ಲಿ ಪ್ರತಿಭಟನೆ ನಡೆದಿದ್ದು, ಸಾವಿರಾರು ನಾಡದೋಣಿಗಳಿಗೆ ತ್ರಾಸಿಯ ಕಡಲ ತೀರದಲ್ಲಿ ಲಂಗರು ಹಾಕಲಾಗಿತ್ತು.

ಉಡುಪಿ, ‌ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯ ನಾಡದೋಣಿ ಮೀನುಗಾರರು ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಹೆದ್ದಾರಿ ತಡೆ ಹಿನ್ನೆಲೆ ; ಬಿಗಿ ಪೊಲೀಸ್ ಬಂದೋಬಸ್ತ್

Advertisement

ಹೆದ್ದಾರಿ ತಡೆ ಹಿನ್ನೆಲೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ನಾಡದೋಣಿ ಮೀನುಗಾರರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಮುನ್ನೆಚ್ಚರಿಕೆ ಹಿನ್ನೆಲೆ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿತ್ತು.

ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ,‌ ಮಾಜಿ ಶಾಸಕ‌ ಗೋಪಾಲ ಪೂಜಾರಿ ಹಾಗೂ ಇತರರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next