Advertisement
ಲೈಟ್ ಫಿಶಿಂಗ್ ಮೀನುಗಾರಿಕೆ, ಅವೈಜ್ಞಾನಿಕ ಮೀನುಗಾರಿಕೆ ನಿಷೇಧಕ್ಕೆ ಆಗ್ರಹಿಸಿ ಬೈಂದೂರು ವಲಯ, ಗಂಗೊಳ್ಳಿ ವಲಯದ ನೇತೃತ್ವದಲ್ಲಿ ತ್ರಾಸಿಯ ಕಡಲ ತೀರದಲ್ಲಿ ಪ್ರತಿಭಟನೆ ನಡೆದಿದ್ದು, ಸಾವಿರಾರು ನಾಡದೋಣಿಗಳಿಗೆ ತ್ರಾಸಿಯ ಕಡಲ ತೀರದಲ್ಲಿ ಲಂಗರು ಹಾಕಲಾಗಿತ್ತು.
Related Articles
Advertisement
ಹೆದ್ದಾರಿ ತಡೆ ಹಿನ್ನೆಲೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ನಾಡದೋಣಿ ಮೀನುಗಾರರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಮುನ್ನೆಚ್ಚರಿಕೆ ಹಿನ್ನೆಲೆ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿತ್ತು.
ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಮಾಜಿ ಶಾಸಕ ಗೋಪಾಲ ಪೂಜಾರಿ ಹಾಗೂ ಇತರರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.