Advertisement

ತುಮಕೂರಿನ ವ್ಯಕ್ತಿ ಸೋಂಕಿಗೆ ಬಲಿ,ಜಿಲ್ಲೆಯಲ್ಲಿ ಹೈ ಅಲರ್ಟ್:ಇಲ್ಲಿದೆ ವ್ಯಕ್ತಿಯ ಪ್ರಯಾಣ ವಿವರ

09:42 AM Mar 28, 2020 | keerthan |

ತುಮಕೂರು: ಕೋವಿಡ್-19 ಸೋಂಕಿಗೆ ರಾಜ್ಯದಲ್ಲಿ ಮೂರನೇ ಬಲಿಯಾಗಿದೆ. ತುಮಕೂರಿನ ಶಿರಾ ಮೂಲದ 60 ವರ್ಷದ ಪ್ರಾಯದ ಸೋಂಕಿತ ಇಂದು ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಸಾರ್ವಜನಿಕರು ಅನಗತ್ಯವಾಗಿ ಮನೆಯಿಂದ ಹೊರಬರಬಾರದು ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ತಿಳಿಸಿದರು.

Advertisement

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಸಾವನ್ನಪ್ಪಿದ ಸೋಂಕಿತ ವ್ಯಕ್ತಿ ಮಾ.07ರಂದು ದೆಹಲಿಯ ಜಾಮೀಯಾ ಮಸೀದಿಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಂಪರ್ಕ ಕ್ರಾಂತಿ ರೈಲಿನಲ್ಲಿ 13 ಮಂದಿಯೊಂದಿಗೆ ಪ್ರಯಾಣ ಮಾಡಿದ್ದು, ಮಾ.14ರಂದು ಬೆಂಗಳೂರಿಗೆ ಬಂದಿದ್ದು, ಅಲ್ಲಿಂದ ಬಸ್ ಮೂಲಕ ಶಿರಾಗೆ ತಲುಪಿದ್ದರು ಎಂದು ತಿಳಿಸಿದರು.

ದೆಹಲಿಯಿಂದ ಬಂದಿದ್ದ ವ್ಯಕ್ತಿಗೆ ಮಾ.18ರಂದು ಜ್ವರ ಬಂದಿದ್ದು, ಮಾ.21ರಂದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಮಾ.24ರಂದು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು, ಕೋವಿಡ್-19 ಸೋಂಕಿನ ಬಗ್ಗೆ ಬೆಂಗಳೂರಿನಿಂದ ಇಂದು ವರದಿ ಬಂದಿದ್ದು, ಬೆಳಿಗ್ಗೆ 10-45ಕ್ಕೆ ವ್ಯಕ್ತಿ ಜಿಲ್ಲಾಸ್ಪತ್ರೆಯ ಐಸೋಲೆಟೆಡ್ ನಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೇಳಿದರು.

ಮೃತ ವ್ಯಕ್ತಿಯೊಂದಿಗೆ ದೆಹಲಿಗೆ ತೆರಳಿದ್ದ 13 ಮಂದಿ ಹಾಗೂ ಕುಟುಂಬದ ಸದಸ್ಯರನ್ನು ಐಸೋಲೇಟೆಡ್ ಮಾಡಲಾಗಿದ್ದು, ಮೃತ ವ್ಯಕ್ತಿಯ ಕುಟುಂಬದ ಎಂಟು ಮಂದಿಗೆ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಹಾಗೂ ಉಳಿದ 16 ಮಂದಿಗೆ ಶಿರಾ ಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಮೃತ ವ್ಯಕ್ತಿಗೆ ಚಿಕಿತ್ಸೆ ನೀಡಿದ್ದ ವೈದ್ಯರು ಹಾಗೂ ಚಿಕಿತ್ಸಕರನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ ಎಂದರು.

ಮೃತ ವ್ಯಕ್ತಿಯ ಅಂತ್ಯ ಸಂಸ್ಕಾರವನ್ನು ಸರ್ಕಾರದ ಸೂಚನೆಯಂತೆ ಕ್ರಮವಹಿಸಲಾಗುವುದು ಎಂದು ಹೇಳಿದರು

Advertisement

ಹೋಂ ಕ್ವಾರಂಟೈನ್ ಉಲ್ಲಂಘಿಸಿದವರ ಮೇಲೆ ಎಫ್ಐಆರ್ ದಾಖಲಿಸಲಾಗುವುದು ಎಂದ ಅವರು, ಸ್ವಯಂ ಸೇವಕರೊಂದಿಗೆ ಸೇರಿ ಮನೆ ಮನೆಗೆ ದಿನಸಿ ವ್ಯವಸ್ಥೆ ಮಾಡಲಾಗುವುದು ಎಂದರು, ಕೋವಿಡ್-19 ವಾರಿಯರ್ ಗಳನ್ನು ತಾಲ್ಲೂಕು ಹಾಗೂ ಸ್ಥಳೀಯ ಸಂಸ್ಥೆ ಮಟ್ಟದಲ್ಲಿ ಕ್ರಮ ವಹಿಸಲಾಗುವುದು ಎಂದರು.

ಜಿಲ್ಲಾಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯಾಗಿ ಪರಿವರ್ತನೆ ಮಾಡಲಾಗುವುದು. ಶ್ರೀದೇವಿ ಆಸ್ಪತ್ರೆಯನ್ನು ಜಿಲ್ಲಾಸ್ಪತ್ರೆಯಾಗಿ ಪರಿವರ್ತಿಸಲಾಗುವುದು, ಅಲ್ಲಿ ಜಿಲ್ಲಾಸ್ಪತ್ರೆ ಸಿಬ್ಬಂದಿಯನ್ನು ನಿಯೋಜಿಸಲಾಗುವುದು ಎಂದು ತಿಳಿಸಿದರು.

ಅನಾವಶ್ಯಕ ಓಡಾಡುವ ದ್ವಿಚಕ್ರವಾಹನಗಳನ್ನು ಜಪ್ತಿ ಮಾಡಲಾಗುವುದು, ಅವರಲ್ಲಿ ಅರಿವು ಮೂಡಿಸಲಾಗುತ್ತಿದೆ, ಡ್ರೋಣ್ , ಮಾನಿಟರಿಂಗ್ ಕ್ಯಾಮೆರಾ ಮೂಲಕ ಪರಿವೀಕ್ಷಣೆ ಮಾಡಲಾಗುವುದು ಎಂದು ಪೊಲೀಸ್ ವರಿಷ್ಠಾಧಿಕಾರಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next