Advertisement

ಪಿಯು ವಿದ್ಯಾರ್ಥಿಗಳಿಗೆ ಪ್ರಯಾಣ ಉಚಿತ

12:33 AM Feb 23, 2019 | Team Udayavani |

ಬೆಂಗಳೂರು: ದ್ವಿತೀಯ ಪಿಯು ವಾರ್ಷಿಕ ಪರೀಕ್ಷಾ ಅವಧಿಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವಿದ್ಯಾರ್ಥಿಗಳ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದೆ. ಮಾ.1 ರಿಂದ 18ರವರೆಗೆ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾಸಂಸ್ಥೆಗಳಲ್ಲಿ ಪರೀಕ್ಷಾ ಕೇಂದ್ರಗಳು ನಿಯೋಜನೆಯಾಗಿರುತ್ತವೆ. ಹೀಗಾಗಿ ಪರೀಕ್ಷೆಗೆ ಹಾಜರಾಗಲು ಅನುಕೂಲವಾಗಲು ಎಲ್ಲ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ತಮ್ಮ ವಾಸ ಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಹಾಗೂ ವಾಸಸ್ಥಳಕ್ಕೆ ಹಿಂದಿರುಗುವಾಗ ಪರೀಕ್ಷಾ ಪ್ರವೇಶ ಪತ್ರ ತೋರಿಸಿ ಕೆಎಸ್‌ಆರ್‌ಟಿಸಿಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗಧೂತ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next