Advertisement

ನೆರೆ ಪೀಡಿತ ಪ್ರದೇಶದಲ್ಲಿ ಪ್ರವಾಸಕ್ಕೆ ಅವಕಾಶವಿಲ್ಲ

06:35 AM Aug 27, 2018 | |

ಮಡಿಕೇರಿ: ಪ್ರವಾಹ, ಭೂ ಕುಸಿತದಿಂದಾಗಿ ಕೊಡಗು ಜಿಲ್ಲೆಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಹಾನಿಗೊಳಗಾಗಿದ್ದು, ಅಪಾಯದ ಮಟ್ಟದಲ್ಲಿವೆ. ಹೀಗಾಗಿ, ಜಿಲ್ಲೆಯಲ್ಲಿನ ಹೋಟೆಲ್‌, ರೆಸಾರ್ಟ್‌, ಹೋಂ-ಸ್ಟೇ ಹಾಗೂ ಇತರ ಖಾಸಗಿ ವಸತಿ ಗೃಹಗಳಲ್ಲಿ ಆಗಸ್ಟ್‌ 31ರವರೆಗೆ ಪ್ರವಾಸಿಗರ ವಾಸ್ತವ್ಯವನ್ನು ರದ್ದುಪಡಿಸಲಾಗಿದೆ. 

Advertisement

ಅಲ್ಲದೆ, ಪ್ರವಾಹಪೀಡಿತ ಪ್ರದೇಶಗಳ ಪ್ರವಾಸಕ್ಕೆ ನಿಷೇಧ ಹೇರಲಾಗಿದೆ. ಆದರೆ,ಜಿಲ್ಲೆಯಲ್ಲಿನ ಕೆಲವು ಹೋಟೆಲ್‌, ರೆಸಾರ್ಟ್‌, ಹೋಂ-ಸ್ಟೇ ಹಾಗೂ ಇತರ ಖಾಸಗಿ ವಸತಿ ಗೃಹಗಳ ಮಾಲೀಕರು ಆದೇಶವನ್ನು ಉಲ್ಲಂಘಿಸಿ,ಪ್ರವಾಸಿಗರಿಗೆ ವಾಸ್ತವ್ಯ ನೀಡುತ್ತಿರುವುದು ಹಾಗೂ ವಾಸ್ತವ್ಯ ಹೂಡಿರುವ ಪ್ರವಾಸಿಗರನ್ನು ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಹಾಗೂ ಇತರ ಪ್ರವಾಸಿ ತಾಣಗಳಿಗೆ ಕರೆದೊಯ್ಯುತ್ತಿರುವುದು ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಆದೇಶ ಉಲ್ಲಂ ಸಿ, ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡುವ ಪ್ರವಾಸಿಗರ ವಿರುದಟಛಿ ಕಾನೂನು ಕ್ರಮ ಕೈಗೊಳ್ಳಲು ಪೊಲೀಸರಿಗೆ ನಿರ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next