Advertisement
ನಗರ ಕೇಂದ್ರ ಗ್ರಂಥಾಲಯದ ಆವರಣದಲ್ಲಿರುವ ಮಕ್ಕಳ ಸಮುದಾಯ ಗ್ರಂಥಾಲಯದಲ್ಲಿ ಶುಕ್ರವಾರ ಆಯೋಜಿಸಿದ್ದ ಗ್ರಂಥಾಲಯ ಪ್ರಾಧಿಕಾರದ ಸಭೆ ಹಾಗೂ 2021-22ನೇ ಸಾಲಿನ ಅಂದಾಜು ಆಯವ್ಯಯ ಸಭೆಯಲ್ಲಿ ಮಾತನಾಡಿದರು. ನಗರದಲ್ಲಿ ಸಂಚಾರಿ ಗ್ರಂಥಾಲಯ ಪ್ರಾರಂಭಿಸಲು ವಾಹನ ಪೂರೈಸುವಂತೆ ಈಗಾಗಲೇ ಕೆಎಸ್‌ಆರ್‌ಟಿಸಿ ನಿಗಮದ ಅಧ್ಯಕ್ಷರಿಗೆ ಪತ್ರ ಬರೆಯಲಾಗಿದ್ದು, ಇದಕ್ಕೆ ಅನುಮೋದನೆ ನೀಡಲಾಗಿದೆ ಎಂದರು.
Related Articles
Advertisement
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗುವಂತಹ ಪುಸ್ತಕಗಳನ್ನು ಹಾಗೂ ಹೆಸರಾಂತ ಲೇಖಕರ ಪುಸ್ತಕಗಳನ್ನು 2021-22ನೇ ಸಾಲಿನ ಗ್ರಂಥಾಲಯ ಪ್ರಾಕಾರದ ಕೋಟಾದಲ್ಲಿ ಓದುಗರ ಬೇಡಿಕೆ ಅನ್ವಯ, ಪ್ರಸ್ತುತ ವರ್ಷದಲ್ಲಿ ಚಿತ್ರದುರ್ಗ ಜಿಲ್ಲೆಯಿಂದ ಐಎಎಸ್, ಕೆಎಎಸ್, ಪಾಸಾದ ವಿದ್ಯಾರ್ಥಿಗಳಿಂದ ಹಾಗೂ ಜಿಲ್ಲಾ ಧಿಕಾರಿಗಳ ಹಾಗೂ ಮುಖ್ಯ ಕಾರ್ಯನಿರ್ವಹಣಾ ಧಿಕಾರಿಗಳ ಮೂಲಕ ಸ್ಪರ್ಧಾತ್ಮಕ ಪುಸ್ತಕಗಳ ಪಟ್ಟಿಯನ್ನು ಸ್ವೀಕರಿಸಲಾಗಿದ್ದು, ಹೆಸರಾಂತ ಪ್ರಕಟಣೆಯ ಪುಸ್ತಕಗಳನ್ನು ಸ್ಪರ್ಧಾತ್ಮಕ ಅಧ್ಯಯನ ಕೇಂದ್ರ ಹಾಗೂ ಶಾಖಾ ಗ್ರಂಥಾಲಯಗಳಿಗೆ ಪುಸ್ತಕಗಳನ್ನು ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಇದೇ ವೇಳೆ ನಗರ ಕೇಂದ್ರ ಗ್ರಂಥಾಲಯದ ಆವರಣದಲ್ಲಿ ಓದುಗರಿಗೆ ಹೊರಾಂಗಣ ಓದುವ ಆವರಣ ನಿರ್ಮಾಣಕ್ಕೆ ಸಭೆಯಲ್ಲಿ ಅನುಮೋದನೆ ನೀಡಲಾಯಿತು. 2021-22ನೇ ಸಾಲಿನ ಚಿತ್ರದುರ್ಗ ಜಿಲ್ಲಾ ಗ್ರಂಥಾಲಯ ಪ್ರಾ ಧಿಕಾರದಲ್ಲಿ ಒಟ್ಟು ರೂ.80 ಲಕ್ಷ ಅಂದಾಜು ಆದಾಯ ನಿರೀಕ್ಷಿಸಲಾಗಿದೆ. ರೂ.77 ಲಕ್ಷ ಅಂದಾಜು ವ್ಯಯ ಆಗುವ ನೀರಿಕ್ಷೆ ಇದೆ ಎಂದು ಸಭೆಗೆ ತಿಳಿಸಿದರು. ಹಿರಿಯ ವಕೀಲರಾದ ಕೃಷ್ಣಮೂರ್ತಿ, ಸರ್ಕಾರಿ ಕಲಾ ಕಾಲೇಜು ಗ್ರಂಥಪಾಲಕ ತಿಪ್ಪೇಸ್ವಾಮಿ, ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗದ ಗ್ರಂಥಪಾಲಕ ಟಿ.ಎನ್.ಪ್ರಸನ್ನ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.